ಕಾಂಗ್ರೆಸ್ ಬೆಂಬಲಿತ ಮತೀಯ ಶಕ್ತಿಗಳ ಅಟ್ಟಹಾಸಕ್ಕೆ ಕಡಿವಾಣ ಯಾವಾಗ?: ಕ್ಯಾಪ್ಟನ್ ಬ್ರಿಜೇಶ್ ಚೌಟ

Upayuktha
0

  • ಬಿಜೆಪಿ ಕಾರ್ಯಕರ್ತರ ಮೇಲೆ ಸರಣಿ ಹಲ್ಲೆ ಪ್ರಕರಣ
  • ತನಿಖೆ ನಡೆಸಿ ಇಲ್ಲಾ ಪರಿಣಾಮ ಎದುರಿಸಿ
  • ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ



ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಪದಗ್ರಹಣದ ಅಂಗವಾಗಿ ಬಂಟ್ವಾಳ ತಾಲೂಕಿನ ಬೋಳಿಯಾರಿನಲ್ಲಿ ನಡೆದ ಸಂಭ್ರಮಾಚರಣೆಯನ್ನು ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಬಿಜೆಪಿ ಕಾರ್ಯಕರ್ತ ಹರೀಶ್ ಅಂಚನ್‌ ಹಾಗೂ ವಿನೋದ್ ಅವರ ಮೇಲೆ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದ್ದು, ಈ ಕೃತ್ಯವನ್ನು ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತೀವ್ರವಾಗಿ ಖಂಡಿಸಿದ್ದಾರೆ.


"ಜಿಲ್ಲೆಯಲ್ಲಿ ಇದೇ ಮಾದರಿಯ ಘಟನೆಗಳು ಪದೇ ಪದೇ ನಡೆಯುತ್ತಿದ್ದು ರಾಜ್ಯ ಸರಕಾರ ಏನು ಮಾಡುತ್ತಿದೆ" ಎಂದು ಅವರು ಪ್ರಶ್ನಿಸಿದ್ದಾರೆ.


ತಮ್ಮ ಪಕ್ಷದ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ "ಕೆಲ ದಿನಗಳ ಹಿಂದೆಯಷ್ಟೇ ಬೆಳ್ತಂಗಡಿ ಮತ್ತು ಉಳ್ಳಾಲದಲ್ಲಿ ಇದೇ ಮಾದರಿಯ ಹಲ್ಲೆ ನಡೆದಾಗ ಪೊಲೀಸ್ ಇಲಾಖೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರೂ ಗಂಭೀರವಾಗಿ ಪರಿಗಣಿಸಿದ ಕಾರಣ ಈ ರೀತಿಯ ಘಟನೆಯು ಪದೇ ಪದೇ ಮರುಕಳಿಸುತ್ತಿದೆ. ಕಾಂಗ್ರೆಸ್ ಬೆಂಬಲಿತ ಮತೀಯ ಶಕ್ತಿಗಳ ಅಟ್ಟಹಾಸ ದಿನೇ ದಿನೇ ಹೆಚ್ಚುತ್ತಿದ್ದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ವಿಫಲಗೊಂಡಿದೆ. ಹತಾಶಗೊಂಡಿರುವ ಕಾಂಗ್ರೆಸ್ ರಾಜಕೀಯ ದ್ವೇಷವನ್ನು ಸಾಧಿಸಲು ನಮ್ಮ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಈ ಹಲ್ಲೆಗಳನ್ನು ನಡೆಸುತ್ತಿರುವುದು ಕಳವಳಕಾರಿ" ಎಂದು ಸಂಸದರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇನ್ನು ಈ‌ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆಯನ್ನು ವಿಧಿಸದೆ ಇಲ್ಲದಿದ್ದಲ್ಲಿ ಪರಿಣಾಮ ಸರಿ ಇರದು ಎಂಬ ಖಡಕ್ ಸಂದೇಶ ಕೂಡ ರಾಜ್ಯ ಸರಕಾರಕ್ಕೆ ಕ್ಯಾಪ್ಟನ್ ಬ್ರಿಜೇಶ್ ಚೌಟ ನೀಡಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top