ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯು ಜೂನ್ 12 ರಂದು ಬೆಳಗ್ಗೆ 11.30 ಕ್ಕೆ ನಗರದ ಮಿಷನ್ ಕಂಪೌಂಡ್ ಬಳಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ನಡೆಯಲಿದೆ.
ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ ಪುರುಷೋತ್ತಮ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧ್ಯಕ್ಷತೆ ವಹಿಸಲಿದ್ದಾರೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ನಾಗರಾಜ ವಿ ನಾಯಕ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವಪ್ರಸಾದ್ ಗಾಂವಕರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ವಿ ಮಡ್ಲೂರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ, ಪೌರಾಯುಕ್ತ ರಾಯಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಹಾಕಪ್ಪ ಆರ್ ಲಮಾಣಿ, ಉಡುಪಿ ಉಪವಿಭಾಗದ ಕಾರ್ಖಾನೆಗಳ ಸಹಾಯಕ ನಿರ್ದೇಶಕ ಎಂ.ಎಸ್. ಮಹಾದೇವ್, ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಶರತ್ ಕುಮಾರ್, ಮಕ್ಕಳ ಕಲ್ಯಾಣ ಸಮಿತಿಯ ಜಿಲ್ಲಾ ಅಧ್ಯಕ್ಷ ರೊನಾಲ್ಡ್ ಫುರ್ಟಡೋ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರೊನಾಲ್ಡ್ ಪ್ರವೀಣ್ ಕುಮಾರ್, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕಿ ಅಮೃತ, ಉಡುಪಿ ಉಪವಿಭಾಗದ ಕಾರ್ಮಿಕ ಅಧಿಕಾರಿ ಕುಮಾರ್ ಬಿ.ಆರ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ