ಮೂಡುಬಿದಿರೆ: ಮೂಡಬಿದ್ರೆಯ ಲೆಕ್ಸಾ ಲೈಟಿಂಗ್ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನ ಸಂಸ್ಥೆಯ ಸಂಸ್ಥಾಪಕರು ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರಾದ ರೋನಾಲ್ಡ್ ಸಿಲ್ವನ್ ಡಿಸೋಜ ಇವರು ಸಂಸ್ಥೆಯ ಆವರಣದಲ್ಲಿ ಗಿಡ ನೆಡುವ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯಸ್ಥರಾದ ರೋನಾಲ್ಡ್ ಸಿಲ್ವನ್ ಡಿಸೋಜ ಇವರು ಸಂಸ್ಥೆಯ ಉದ್ಯೋಗಿಗಳಿಗೆ ಪರಿಸರ ಹಾಗೂ ಪ್ರಕೃತಿಯನ್ನು ಉಳಿಸಲು ನಾವೆಲ್ಲರೂ ಪ್ರಬುದ್ದರಾಗಿ ಸಮಾಜದಲ್ಲಿ ವ್ಯವಹರಿಸಬೇಕು ಮತ್ತು ನಮ್ಮ ಸುತ್ತಮುತ್ತಲಿನ ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ. ನಮ್ಮ ಈ ಸಂಸ್ಥೆ ಪ್ರಕೃತಿಯ ಮಡಿಲಲ್ಲಿ ಪ್ರಶಾಂತ ವಾತಾವರಣದಲ್ಲಿ ಇದೆ ಹಾಗೂ ಇಲ್ಲಿ ತಯಾರಿಸಿದ ಉತ್ಕೃಷ್ಟ ಗುಣಮಟ್ಟದ LED ಲೈಟ್‌ಗಳು ದೇಶಾದದ್ಯಂತ ಪ್ರಮುಖ ಪ್ರೇಕ್ಷಣೀಯ ಸ್ಥಳಗಳನ್ನು ಬೆಳಗುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆ ಎಂಬ ಸಂದೇಶ ನೀಡಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಉದ್ಯೋಗಿಗಳು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ