ಉಡುಪಿ ನಗರಸಭೆಯಿಂದ ವಿಶ್ವ ಪರಿಸರ ದಿನಾಚರಣೆ

Upayuktha
0


ಉಡುಪಿ: ಉಡುಪಿ ನಗರಸಭೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಗರದ ಕರಾವಳಿ ಬೈಪಾಸ್ ಬಳಿ ಇರುವ ಡಿವೈಡರ್‌ನಲ್ಲಿ ನಗರಸಭಾ ಪೌರಾಯುಕ್ತ ರಾಯಪ್ಪ ಅವರು ಗಿಡ ನೆಡುವ ಮೂಲಕ ಇಂದು ಚಾಲನೆ ನೀಡಿದರು.

  

ಈ ಸಂದರ್ಭದಲ್ಲಿ ಮಾತನಾಡಿ, ನಮ್ಮೆಲ್ಲರಿಗೆ ಸೃಷ್ಟಿ ನೀಡಿರುವಂತಹ ಅಮೂಲ್ಯವಾದ ಕೊಡುಗೆ ಪರಿಸರ. ಆದರೆ ಇಂದು ನಾವೆಲ್ಲ ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವುದು, ಅಭಿವೃದ್ಧಿ ಹೆಸರಲ್ಲಿ ಮರಗಳನ್ನು ಕಡಿಯುವ ಮೂಲಕ ಪರಿಸರವನ್ನು ಹಾಳು ಮಾಡುತ್ತಿದ್ದೇವೆ. ಪರಿಸರ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಪರಿಸರ ಬಗ್ಗೆ ಪ್ರತಿಯೊಬ್ಬ ನಾಗರಿಕರಿಗೂ ತಿಳಿವಳಿಕೆ ಇರಬೇಕು ಎಂದರು.

  

ಪರಿಸರ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ನಗರಸಭೆ ವತಿಯಿಂದ ತ್ಯಾಜ್ಯವನ್ನು ಮೂಲದಲ್ಲೇ ಹಸಿಕಸ, ಒಣಕಸವನ್ನಾಗಿ ಬೇರ್ಪಡಿಸಿ ಮರುಬಳಕೆ ಮಾಡಿದರೆ ಮಾತ್ರ ಪರಿಸರ ಉಳಿಯುತ್ತದೆ. ಉಡುಪಿಯನ್ನು ತ್ಯಾಜ್ಯ ಮುಕ್ತ ನಗರವನ್ನಾಗಿಸಲು ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ನಗರಸಭೆಯೊಂದಿಗೆ ಕೈಜೋಡಿಸಬೇಕು ಎಂದರು.

  

ಈ ಸಂದರ್ಭದಲ್ಲಿ ನಗರಸಭೆಯ ಪರಿಸರ ಅಭಿಯಂತರರಾದ ಸ್ನೇಹ ಕೆ.ಎಸ್, ಪ್ರಭಾರ ಆರೋಗ್ಯ ನಿರೀಕ್ಷಕ ಮನೋಹರ್, ಹರೀಶ್ ಬಿಲ್ಲವ, ಸುರೇಂದ್ರ ಹೋಬಳಿದಾರ್, ನಗರಸಭೆಯ ಸೂಪರ್ ವೈಸರ್‌ಗಳು ಉಪಸ್ಥಿತರಿದ್ದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top