ಅಡ್ಯನಡ್ಕ: ಅಡ್ಯನಡ್ಕ ಜನತಾ ಪ್ರೌಢಶಾಲೆಯ ಕ್ರೀಡಾ ಸಂಘದ ವತಿಯಿಂದ ಜೂನ್ 21ರಂದು ‘ಅಂತರಾಷ್ಟ್ರೀಯ ಯೋಗ ದಿನಾಚರಣೆ’ ಜರುಗಿತು.
ಮುಖ್ಯ ಅತಿಥಿಯಾಗಿ ಆಡಳಿತ ಮಂಡಳಿ ಸದಸ್ಯರು ಹಾಗೂ ಜನತಾ ಪ್ರೌಢಶಾಲಾ ಉಸ್ತುವಾರಿ ಶ್ರೀ ಕೇಶವ ಜೋಯಿಸ ಚವರ್ಕಾಡು ಯೋಗ ಶಿಕ್ಷಣದ ಮಹತ್ವದ ಬಗ್ಗೆ ಮಾತನಾಡಿದರು. ಮುಖ್ಯೋಪಾಧ್ಯಾಯರಾದ ಟಿ. ಆರ್. ನಾಯ್ಕ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ದೈಹಿಕ ಶಿಕ್ಷಣ ಶಿಕ್ಷಕ ಮತ್ತು ಯೋಗ ತರಬೇತುದಾರರಾದ ಪಿ. ಉದಯಕೃಷ್ಣ ಭಟ್ ಮಾರ್ಗದರ್ಶನದಲ್ಲಿ ಯೋಗ ಪ್ರದರ್ಶನ ಏರ್ಪಡಿಸಲಾಗಿತ್ತು. ಎಲ್ಲಾ ಶಿಕ್ಷಕ ಶಿಕ್ಷಕಿಯರು ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಉಪಸ್ಥಿತರಿದ್ದರು. 10ನೇ ತರಗತಿಯ ವಿದ್ಯಾರ್ಥಿ ಅಬೂಬಕ್ಕರ್ ಸಿದ್ದಿಕ್ ಅವರು ವಿಶ್ವ ಯೋಗ ದಿನದ ಪ್ರತಿಜ್ಞಾವಿಧಿ ಬೋಧಿಸಿದರು. ಕನ್ನಡ ಅಧ್ಯಾಪಕ ಶಿವಕುಮಾರ್ ಸಾಯ ಅವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕಿ ಶ್ರೀಮತಿ ಕುಸುಮಾವತಿ ಅವರು ವಂದಿಸಿದರು.
45 ಹುಡುಗರು ಹಾಗೂ 35 ಹುಡುಗಿಯರು ಸೇರಿ ಒಟ್ಟು 80 ವಿದ್ಯಾರ್ಥಿಗಳು ಹಾಗೂ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಯೋಗ ದಿನಾಚರಣೆಯಲ್ಲಿ ಭಾಗವಹಿಸಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

