ಮಂಗಳೂರು: ಕೇವಲ ದೈಹಿಕ ಕಸರತ್ತಲ್ಲ, ದೇಹ ಮನಸ್ಸು ಗಳನ್ನು ಒಗ್ಗೂಡಿಸುವ ಒಂದು ಪವಿತ್ರ ಕ್ರಿಯೆ ಎಂದು ಶ್ರೀ ಗೋಕರ್ಣನಾಥೇಶ್ವರ ವಿದ್ಯಾಸಂಸ್ಥೆಗಳ ಸಂಚಾಲಕ ವಸಂತ್ ಕುಮಾರ್ ಹೇಳಿದರು.
ಅವರು ಕೇಂದ್ರ ಸಂವಹನ ಇಲಾಖೆ ಮಂಗಳೂರು ಶ್ರೀ ಗೋಕರ್ಣನಾಥೇಶ್ವರ ಪದವಿ ಕಾಲೇಜು ಮತ್ತು ಶ್ರೀ ಗೋಕರ್ಣನಾಥೇಶ್ವರ ವಿದ್ಯಾಸಂಸ್ಥೆಗಳ ಸಹಯೋಗದಲ್ಲಿ ನಡೆದ ಹತ್ತನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಕಾಲೇಜು ಆವರಣದಲ್ಲಿ ಉದ್ಘಾಟಿಸಿ ಮಾತನಾಡುತ್ತಿದ್ದರು .
ಶ್ರೀ ಗೋಕರ್ಣನಾಥೇಶ್ವರ ಪದವಿ ಕಾಲೇಜಿನ ಪ್ರಾಂಶುಪಾಲ, ಡಾ. ಜಯಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರಿನ ಪಾಂಚಜನ್ಯ ಯೋಗ ಶಾಲೆಯ ನಿರ್ದೇಶಕ ಸಂತೋಷ್ ಕುಮಾರ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಕ್ಷೇತ್ರ ಪ್ರಚಾರ ಅಧಿಕಾರಿ ಜಿ. ತುಕಾರಾಮ ಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿಗಳಿಂದ ಯೋಗ ಪ್ರಾತ್ಯಕ್ಷಿಕೆ ನಡೆಯಿತು. ಶ್ರೀ ಗೋಕರ್ಣನಾಥೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಭಾರತಿ, ಸ್ನಾತಕೋತ್ತರ ವಿಭಾಗದ ಸುಜಾತ ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿ ಬಾಲಚಂದ್ರ ಮತ್ತಿತರರು ಉಪಸ್ಥಿತರಿದ್ದರು. ಅಮಿತ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

.png)
