ಯುವಜನತೆ ರಾಷ್ಟ್ರೀಯ ಚಿಂತನೆಯೊಂದಿಗೆ ಸಾಗಬೇಕು: ಡಾ.ಪ್ರಭಾಕರ್ ಭಟ್ ಕಲ್ಲಡ್ಕ

Upayuktha
0

ವಿವೇಕಾನಂದ ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ ಮತ್ತು ಹಿರಿಯ ವಿದ್ಯಾರ್ಥಿ ಸಂಘದ ದಿನಾಚರಣೆ



ಪುತ್ತೂರು: ದೀಪವು ಪ್ರಗತಿಯ ಸಂಕೇತ. ದೀಪದಂತೆ ವಿದ್ಯಾರ್ಥಿಗಳ ಬದುಕಿನಲ್ಲಿಯೂ  ರಾಷ್ಟ್ರೀಯತೆ,  ಹಾಗೂ ಹೊಸ ಚಿಂತನೆಗಳು ಬೆಳಗಲಿ. ಯುವಜನತೆ ದೇಶದ ಸರ್ವತೋಮುಖ ಬೆಳವಣಿಗೆಯತ್ತ ಗಮನ ಹರಿಸಬೇಕಾಗಿದೆ. ವಿದ್ಯಾರ್ಥಿಗಳ ಭವಿಷ್ಯಕ್ಕೆ ಬೇಕಾದ ಉತ್ತಮ ಆಚಾರ ವಿಚಾರಗಳನ್ನು, ಆದರ್ಶ ಹಾಗೂ  ಧ್ಯೇಯವನ್ನಿಟ್ಟುಕೊಂಡು ಈ ಸಂಸ್ಥೆ ಬೆಳೆದು ಬಂದಿದೆ. ಹಾಗಾಗಿ ಸದ್ವಿಚಾರಗಳನ್ನು ಮೈಗೂಡಿಸಿಕೊಂಡು ತಮ್ಮ ಗುರಿಗಳನ್ನು ಸಾಧಿಸುವತ್ತ ಗಮನಹರಿಸಿ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ  ಅಧ್ಯಕ್ಷ ಡಾ ಪ್ರಭಾಕರ್ ಭಟ್ ಕಲ್ಲಡ್ಕ  ಹೇಳಿದರು.


ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ  ಮಹಾವಿದ್ಯಾಲಯ (ಸ್ವಾಯತ್ತ)ಪುತ್ತೂರು ಹಿರಿಯ ವಿದ್ಯಾರ್ಥಿ ಸಂಘ ಮತ್ತು ಐಕ್ಯೂಎಸಿ ಇದರ ಸಹಯೋಗದಲ್ಲಿ ಸ್ನಾತಕ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ದೀಪ ಪ್ರಧಾನ ಕಾರ್ಯಕ್ರಮ ಹಾಗೂ ಹಿರಿಯ ವಿದ್ಯಾರ್ಥಿ ಸಂಘ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು..


ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿದ ಕಾಲೇಜಿನ ವಿಶ್ರಾಂತ ಪ್ರಾಚಾರ್ಯ ಡಾ.ಮಾಧವ ಭಟ್ ಎಚ್ ಮಾತನಾಡಿ, ಕಾಲೇಜಿನಲ್ಲಿ  ಕಳೆದ ಕ್ಷಣಗಳು ಅವಿಸ್ಮರಣೀಯ. ಈ ವಿದ್ಯಾ ಸಂಸ್ಥೆಯ  ರಾಯಭಾರಿಗಳಾಗಿ ವಿದ್ಯಾರ್ಥಿಗಳು ಹೊರಹೊಮ್ಮುವಂತಹ ಸಂದರ್ಭದಲ್ಲಿ ತಾವು ಶಿಕ್ಷಣ ಪಡೆದ ಸಂಸ್ಥೆಯನ್ನು ಮರೆಯಬಾರದು. ಈ ವಿದ್ಯಾಸಂಸ್ಥೆ ನಿಮ್ಮ ಮುಂದಿನ ಜೀವನದಲ್ಲಿ ಮುಖ್ಯ ಪಾತ್ರ ವಹಿಸುತ್ತದೆ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಗಣಿತಶಾಸ್ತ್ರ ವಿಭಾಗದ ವಿಶ್ರಾಂತ ಪ್ರಾಧ್ಯಾಪಕಿ ಪ್ರೊ ವತ್ಸಲಾ ರಾಜ್ಞಿ ಇಂಗ್ಲೀಷ್ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಮೇಜರ್ ಪ್ರೊ ಎಂ.ಎನ್ ಚೆಟ್ಟಿಯಾರ್ , ಕಾಲೇಜಿನ ವಿಶ್ರಾಂತ ಪ್ರಾಚಾರ್ಯ ಡಾ. ಮಾಧವ ಭಟ್ ಎಚ್ ಹಾಗೂ ಕಾಲೇಜಿನ  ಹಿರಿಯ ವಿದ್ಯಾರ್ಥಿಗಳಾದ ಬೆಂಗಳೂರಿನ  ಅಕ್ಸೆಂಚರ್ ಕಂಪನಿಯ ಮ್ಯಾನೇಜಿಂಗ್ ಡೈರೆಕ್ಟರ್  ಪುರುಷೋತ್ತಮ ಕಡಂಬು, ಕೇರಳ ಸರಕಾರದ ವಿಶ್ರಾಂತ ಡೆಪ್ಯೂಟಿ ಸೂಪರಿಂಟೆAಡ್ ಆಫ್ ಪೊಲೀಸ್ ಶ್ರೀರಾಮ ತಲೆಂಗಳ ಮತ್ತು ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಕಲಾವಿಭಾಗದಲ್ಲಿ 5 ನೇ ರ‍್ಯಾಂಕ್ ಪಡೆದ ಶ್ರೀಜನಿ ಎಸ್.ಆರ್ ,9ನೇ ರ‍್ಯಾಂಕ್ ಪಡೆದ ವೀರೇಶ, ವಿಜ್ಞಾನ ವಿಭಾಗದಲ್ಲಿ ಐದನೇ ರ‍್ಯಾಂಕ್ ಪಡೆದ ಶರಧಿ ಎಸ್. ಕೆ, ಸ್ನಾತಕೋತರ ಪತ್ರಿಕೋದ್ಯಮ ವಿಭಾಗದಲ್ಲಿ ಮೊದಲ ರ‍್ಯಾಂಕ್ ಪಡೆದ ದಿವ್ಯಶ್ರೀ ವಿ ಹಾಗೂ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. 

 

ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ, ಸಂಚಾಲಕ ಮುರಳಿಕೃಷ್ಣ ಕೆ.ಎನ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ  ಸತೀಶ್ ರಾವ್ .ಪಿ, ಕಾರ್ಯದರ್ಶಿ ಡಾ.ಮನಮೋಹನ ಎಂ ಹಾಗೂ  ಐಕ್ಯೂಎಸಿ ಘಟಕದ ಸಂಯೋಜಕ ಪ್ರೊ. ಶಿವಪ್ರಸಾದ್ ಕೆ.ಎಸ್ ಉಪಸ್ಥಿತರಿದ್ದರು. 


ಕಾರ್ಯಕ್ರಮವನ್ನು ಪರೀಕ್ಷಾಂಗ ಕುಲಸಚಿವ ಡಾ.ಹೆಚ್.ಜಿ ಶ್ರೀಧರ್ ಸ್ವಾಗತಿಸಿ, ಇತಿಹಾಸ ವಿಭಾಗದ ಮುಖ್ಯಸ್ಥ ಹಾಗೂ ಕಾಲೇಜಿನ ವಿಶೇಷ ಆಡಳಿತ ಅಧಿಕಾರಿ ಡಾ.ಶ್ರೀಧರ್ ನಾಯ್ಕ್ ಬಿ ವಂದಿಸಿದರು. ವಿದ್ಯಾರ್ಥಿನಿಯರಾದ ಪೂರ್ಣಿಮಾ ಯು.ಎಸ್ ಹಾಗೂ ಶೈನಿತ ಆರ್.ಎಸ್ ನಿರ್ವಹಿಸಿದರು.


ಕಾರ್ಯಕ್ರಮದಲ್ಲಿ ಅಂತಿಮ ಪದವಿ ಮತ್ತು ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಪುಸ್ತಕವನ್ನು ನೀಡುವುದರ ಮೂಲಕ ಹಿರಿಯ ವಿದ್ಯಾರ್ಥಿ ಸಂಘಕ್ಕೆ ಸ್ವಾಗತಿಸಲಾಯಿತು ಹಾಗೂ ಅಂತಿಮ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಂದ ಕಿರಿಯ ವಿದ್ಯಾರ್ಥಿಗಳಿಗೆ ದೀಪ ಪ್ರದಾನ ಮಾಡಲಾಯಿತು.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top