ಉಡುಪಿ: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನ ದ್ವಾರಕಾಮಯಿ ಮಠ ದ ಪೀಠಾಧಿಪತಿ ಶ್ರೀ ಸಾಯಿ ಈಶ್ವರ್ ಗುರೂಜಿಯವರ 108 ದಿನಗಳಲ್ಲಿ 108 ಕ್ಷೇತ್ರ ಪ್ರದಕ್ಷಿಣೆ 31 ದಿನ ದ ಸಂದರ್ಶನ ಶ್ರೀ ಕ್ಷೇತ್ರ ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಜೂನ್ 14 ಆದಿತ್ಯವಾರ ದಂದು ನಡೆಯಿತು.
ಈ ಸಂದಭ೯ದಲ್ಲಿ ಶ್ರೀ ಸಾಯಿ ಈಶ್ವರ್ ಗುರೂಜಿ ಆಶೀವ೯ಚನ ನೀಡಿ, ಹಿಂದೂ ಧಮ೯ದ ರಕ್ಷಣೆಗೆ ಎಲ್ಲರೂ ಒಂದಾಗಿ ಕೆಲಸ ಮಾಡಬೇಕಾಗಿದೆ.ಮತಾಂತರ ಮುಂತಾದ ವ್ಯಾಧಿ ನಮ್ಮ ಸಮಾಜದಿಂದ ದೂರವಾಗಬೇಕು.ಗಡಿಯಲ್ಲಿ ದೇಶ ರಕ್ಷಣೆ ಮಾಡುವ ಯೋಧರಿಗೆ ನೈತಿಕ ಬೆಂಬಲ ನೀಡುವ ಉದ್ದೇಶ ದಿಂದ ಈ ಕಾಯ೯ ನಡೆಯುತ್ತಿರುದಾಗಿ ಹೇಳಿದರು.
ಕ್ಷೇತ್ರದ ವತಿಯಿಂದ ಆಡಳಿತ ಮೊಕ್ತೇಸರ ರಮೇಶ್ ನಾಯಕ್ ರವರು ಗುರೂಜಿಯವರನ್ನು ಗೌರವಿಸಿದರು.
ಕಾರ್ಯಕ್ರಮದಲ್ಲಿ ಗುರೂಜಿಯವರು ಬಿಲ್ವಪತ್ರ ಗಿಡ ಮತ್ತು ಮನವಿ ಪತ್ರವನ್ನು ಆಡಳಿತ ಮಂಡಳಿಯ ಸದಸ್ಯರಿಗೆ ನೀಡಿದರು. ನೀರೆ ಗ್ರಾ.ಪಂ ಮಾಜಿ ಅಧ್ಯಕ್ಷ ಸದಾನಂದ ಪ್ರಭು, ಪುರೋಹಿತ ರಮೇಶ್ ಭಟ್, ಪೆಲತ್ತೂರು ಫ್ರೆಂಡ್ಸ್ ಕ್ಲಬ್ ಸದಸ್ಯರು, ಜಿ.ಪಂ ಮಾಜಿ ಸದಸ್ಯೆ ಗೀತಾಂಜಲಿ ಸುವರ್ಣ, ಸತೀಶ್ ದೇವಾಡಿಗ, ರಾಘವೇಂದ್ರ ಪ್ರಭು, ಕರ್ವಾಲು, ನಿಲೇಶ್ ಮುಂತಾದವರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ