ಶಿರಸಿ: ಶ್ರೀ ಕ್ಷೇತ್ರ ಕರ್ಕಿಯ ದೈವಜ್ಞ ಬ್ರಾಹ್ಮಣ ಮಠಾಧೀಶರಾದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಮಹಾಸ್ವಾಮಿಗಳವರ 39ನೇ ವರ್ಷದ ಚಾತುರ್ಮಾಸ್ಯ ಹಾಗೂ ಕಿರಿಯ ಶ್ರೀಗಳಾದ ಸುಜ್ಞಾನೇಶ್ವರ ಭಾರತಿ ಸ್ವಾಮಿಗಳವರು ಪ್ರಥಮ ವರ್ಷದ ಚಾತುರ್ಮಾಸ್ಯ ವೃತಾಚರಣೆ ಸಂಕಲ್ಪ ಶಿರಸಿಯ ದೈವಜ್ಞ ಕಲ್ಯಾಣ ಮಂಟಪದಲ್ಲಿ ಭಾನುವಾರ ಗುರುಪೂರ್ಣಿಮೆ ದಿನದಂದು ನೆರವೇರಿತು.
ಬೆಳಿಗ್ಗೆ ದೇವತಾ ಪ್ರಾರ್ಥನೆ, ಶ್ರೀಗಳವರಿಂದ ವ್ಯಾಸ ಪಂಚಕ, ಆದಿಶಂಕರಚಾರ್ಯರ ಪೂಜೆ ಮೂಲಕ ಚಾತುರ್ಮಾಸ್ಯ ವ್ರತಾಚರಣೆ ಸಂಕಲ್ಪಿಸಿದರು.
ಬಳಿಕ ದೈವಜ್ಞ ಬ್ರಾಹ್ಮಣ ಸಮಾಜದ ವತಿಯಿಂದ ಕುಲಗುರುಗಳ ಪಾದುಕಾ ಪೂಜೆ, ಸಭಾ ಕಾರ್ಯಕ್ರಮ, ಶ್ರೀಗಳಿಂದ ಆಶೀರ್ವಚನ, ವ್ಯಾಸ ಮಂತ್ರಾಕ್ಷತೆ ನಡೆಯಿತು. 12.30ಕ್ಕೆ ಶ್ರೀಗಳ ಪಟ್ಟದ ದೇವರ ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಿತು.
ಸೆ. 18ರಂದು ಚಾತುರ್ಮಾಸ್ಯದ ಸೀಮೋಲ್ಲಂಘನ ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀ ಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ