ಆಳ್ವಾಸ್ ಹೋಮಿಯೋಪತಿ ವೈದ್ಯಕೀಯ ಕಾಲೇಜು: ವೈದ್ಯರ ದಿನಾಚರಣೆ

Upayuktha
0


ಮೂಡುಬಿದಿರೆ: ಆಳ್ವಾಸ್ ಹೋಮಿಯೋಪತಿ ವೈದ್ಯಕೀಯ ಕಾಲೇಜಿನಲ್ಲಿ `ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದ ಕೆನಡಾದ ಖ್ಯಾತ ಹೋಮಿಯೋಪತಿ ವೈದ್ಯರು ಹಾಗೂ ಕೆಐಐಎ ಮತ್ತು ಕೆಎಐಎ ಸಂಸ್ಥೆಗಳ ಸಂಸ್ಥಾಪಕರಾದ ಡಾ| ವಲರ್ಮತಿ ರೇಚೆಲ್ ಫೆರ್ನಾಂಡಿಸ್ ಮಾತನಾಡಿ, ಆಳ್ವಾಸ್ ಹೋಮಿಯೋಪತಿ ಕಾಲೇಜಿನ ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಇತರ ಕ್ಷೇತ್ರಗಳ ಉನ್ನತ ಸಾಧನೆಗಳನ್ನು ಶ್ಲಾಘಿಸಿದರು. ಜೊತೆಗೆ ವೈದ್ಯಕೀಯ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಹಾಗೂ ವೈದ್ಯಕೀಯ ಸಂಶೋಧನೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ತಿಳಿಸಿದರು. 


ಇನ್ನೋರ್ವ ಅತಿಥಿ ಯಎಇನ ಪ್ರಖ್ಯಾತ ಹೋಮಿಯೋಪತಿ ವೈದ್ಯ ಡಾ। ಆಲ್ಫೋನ್ಸ್ ಡಿಸೋಜ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಅವಧಿಯಲ್ಲಿ ವೈದ್ಯಕೀಯ ಶಿಕ್ಷಣದೊಂದಿಗೆ ಕೌಶಲ್ಯಹಾಗೂ ವೈದ್ಯರು ಸಹಾನುಭೂತಿ ಮತ್ತು ಸೇವಾ ಮನೋಭಾವಗಳನ್ನು ತಮ್ಮ ವೃತ್ತಿಯಲ್ಲಿ  ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು.


ಈ ಸಂದರ್ಭದಲ್ಲಿ ಅತಿಥಿಗಳನ್ನು ತಮ್ಮ ವೈದ್ಯಕೀಯ ಕ್ಷೇತ್ರದಲ್ಲಿನ ಸಾಧನೆಗಾಗಿ ಸನ್ಮಾನಿಸಲಾಯಿತು.


ಇದೇ ಸಂದರ್ಭದಲ್ಲಿ ಕಾಲೇಜಿನ ತ್ರೈಮಾಸಿಕ ಡಿಜಿಟಲ್ ಪತ್ರಿಕೆ ಇ- ಬುಲೆಟಿನ್ ‘ಹೋಮಿಯೋ ಇನ್‌ಸೈಟ್' ಅನ್ನು ಬಿಡುಗಡೆಗೊಳಿಸಲಾಯಿತು. ಕಾಲೇಜಿನ 2024-25ನೇ ಸಾಲಿನ ವಿದ್ಯಾರ್ಥಿ ಪರಿಷತ್" ಅನ್ನು ನೇಮಕಗೊಳಿಸಲಾಯಿತು.


ಅಳ್ವಾಸ್ ಹೋಮಿಯೋಪತಿ ಕಾಲೇಜಿನ ಪ್ರಾಂಶುಪಾಲರಾದ ಡಾ ಹೆರಾಲ್ಡ್ ರೋಷನ್ ಪಿಂಟೊ ಡಾ ಪ್ರಜ್ಞಾ ಆಳ್ವ, ಕಾಲೇಜಿನ ಶೈಕ್ಷಣಿಕ ಸಲಹೆಗಾರ ಡಾ ಪ್ರವೀಣ್ ರಾಜ್ ಆಳ್ವ, ರೆಪೋಟ್ರಿ ವಿಭಾಗದ ಮುಖ್ಯಸ್ಥೆ ಡಾ ವಸುಮತಿ ಕೋಡಿಕಲ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ನಿಶ್ಚಿತಾ ಕಾರ್ಯಕ್ರಮವನ್ನು ನಿರೂಪಿಸಿದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top