ನೂತನ ಕಾನೂನುಗಳ ಬಗ್ಗೆ ಅರಿವು ಕಾರ್ಯಕ್ರಮ

Upayuktha
0




ಮಂಗಳೂರು: 
ಜುಲೈ 1ರಿಂದ ಜಾರಿಯಾಗಿರುವ ಭಾರತೀಯ ನ್ಯಾಯ ಸಂಹಿತೆ-2023, ಭಾರತೀಯ ಸುರಕ್ಷಾ ಅಧಿನಿಯಮ-2023 ಹಾಗೂ ಭಾರತೀಯ ಸಾಕ್ಷ್ಯ ಅಧಿನಿಯಮ-2023 ಅರಿವು ಕಾರ್ಯಕ್ರಮ ಏರ್ಪಡಿಸಲಾಯಿತು.


ನಗರದ ಜಿಲ್ಲಾ ಪಂಚಾಯತ್ ಸ್ಟುಡಿಯೋದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಸಹಯೋಗದಲ್ಲಿ ಜಿಲ್ಲೆಯಾದ್ಯಂತ ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಪಂಚಾಯಿತಿ ಸದಸ್ಯರು, ಸಖಿ, ಸಾಂತ್ವನ ಕೇಂದ್ರದ ಸಿಬ್ಬಂದಿಗಳು, ವಿವಿಧ ಇಲಾಖೆಗಳ ವಸತಿ ನಿಲಯ ಹಾಗೂ ವಸತಿ ಶಾಲೆಗಳ ನಿಲಯ ಪಾಲಕರು, ಶಿಕ್ಷಕರು ಮುಂತಾದವರಿಗೆ ವೆಬಿನಾರ್ ಮೂಲಕ ಅರಿವು ಕಾರ್ಯಕ್ರಮವನ್ನು ಜಿಲ್ಲೆಯ 500 ಕೇಂದ್ರಗಳಲ್ಲಿ ಹಮ್ಮಿಕೊಳ್ಳಲಾಯಿತು, ಸುಮಾರು 9000 ಜನರು ಭಾಗವಹಿಸಿದರು.


ಸಂಪನ್ಮೂಲ ವ್ಯಕ್ತಿಗಳಾಗಿ ಖ್ಯಾತ ವಕೀಲರಾದ ಶುಕರಾಜ್ ಎಸ್. ಕೊಟ್ಟಾರಿ ಮಾತನಾಡಿ, ಭಾರತೀಯ ನ್ಯಾಯ ಸಂಹಿತೆ -2023ರ ಕುರಿತು ಸಂಕ್ಷಿಪ್ತವಾಗಿ ಮಾಹಿತಿ ನೀಡಿದರು.


ಇನ್ನೋರ್ವ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ವಕೀಲರಾಗಿರುವ ಶ್ರೀಧರ ಎಣ್ಮಕಜೆ ಮಾತನಾಡಿ, ಭಾರತೀಯ ಸುರಕ್ಷಾ ಅಧಿನಿಯಮ-2023ರ ಕುರಿತು ಬೆಳಕು ಚೆಲ್ಲಿದರು. ನ್ಯಾಯವಾದಿ ಪ್ರಥ್ವಿರಾಜ್ ಶೆಟ್ಟಿ ಅವರು ಭಾರತೀಯ ಸಾಕ್ಷ್ಯ ಅಧಿನಿಯಮ -2023ರ ಕುರಿತು ಮಾಹಿತಿ ನೀಡಿದರು.


ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಉಸ್ಮಾನ್ ಎ. ಸ್ವಾಗತಿಸಿದರು. ಜಿಲ್ಲಾ ನಿರೂಪಣಾಧಿಕಾರಿ ಕುಮಾರ್ ಎಸ್. ಹಾಗೂ ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ರಶ್ಮಿ ಕೆ.ಎಂ. ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top