ಚಿಟಿಗಿನಕೊಪ್ಪ ದತ್ತು ಗ್ರಾಮದಲ್ಲಿ ಎನ್.ಎಸ್.ಎಸ್ ಶಿಬಿರ

Upayuktha
0




ಬೇವೂರ: ಬೇವೂರಿನ ಪಿಎಸ್ ಸಜ್ಜನ ಕಲಾ ಮಹಾವಿದ್ಯಾಲಯದ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರವನ್ನು ಸಮೀಪದ ಚಿಟಗಿನಕೊಪ್ಪ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದು ಸೋಮವಾರದಂದು ಉದ್ಘಾಟನಾ ಸಮಾರಂಭ ಜರುಗಲಿದೆ. ಈ ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯವನ್ನು ಶ್ರೀ ವಶಿಷ್ಠ ಮಹಾಮುನಿಗಳು ಶ್ರದ್ಧಾನಂದ ಮಠ ಸುಕ್ಷೇತ್ರ ಸಿತಿಮನಿ ಇವರು ವಹಿಸಿಕೊಳ್ಳಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆದರ್ಶ ವಿದ್ಯಾವರ್ಧಕ ಸಂಘದ ಸದಸ್ಯ ಡಿ.ಜಿ ಶಿರೂರ ವಹಿಸಿಕೊಳ್ಳಲಿದ್ದಾರೆ.


ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬಾಗಲಕೋಟೆಯ ಎಸ್.ಆರ್. ನರಸಾಪೂರ ಕಲಾ ಹಾಗೂ ಎಂ.ಬಿ ಶಿರೂರು ವಾಣಿಜ್ಯ ಮಹಾವಿದ್ಯಾಲಯದ ಡಾ.ಎಸ್.ಎಸ್. ಹಂಗರಗಿ ಸಹ ಪ್ರಾಧ್ಯಾಪಕರು ಭಾಗಿಯಾಗಲಿದ್ದಾರೆ. ಎಸ್. ಡಿ ಎಂ.ಸಿ ಅಧ್ಯಕ್ಷರಾದ ವೈ. ಎಚ್. ಬೆನಕನವಾರಿ ಗ್ರಾಮ ಪಂಚಾಯತಿ ಸದಸ್ಯರಾದ ಎನ್. ಬಿ ಪಾಟೀಲ್ ಶ್ರೀಮತಿ ಜಿ.ವಾಯ್ ಮಾದರ್, ಶಿಕ್ಷಣ ಪ್ರೇಮಿಗಳಾದ ಶ್ರೀಕರ ದೇಸಾಯಿ ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಶ್ರೀಮತಿ ಎಸ್.ಎಂ. ಚಲವಾದಿ ಸೇರಿದಂತೆ ಎಸ್‌.ಡಿ.ಎಂ.ಸಿ.ಯ ಎಲ್ಲಾ ಸದಸ್ಯರು ಹಾಗೂ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಚಿಟಿಗಿನಕೊಪ್ಪದ ಪ್ರಭಾರಿ ಮುಖ್ಯ ಗುರುಗಳಾದ ಸುನಿಲ್. ಆರ್. ಪಾಟೀಲ್ ಇವರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆಂದು ಪ್ರಾಚಾರ್ಯ ಡಾ. ಜ.ಗು ಬೈರಮಟ್ಟಿ ಹಾಗೂ ಯೋಜನಾಧಿಕಾರಿ ಜಿ.ಎಸ್ ಗೌಡರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಒಂದು ವಾರದ ವಿಶೇಷ ಶಿಬಿರದಲ್ಲಿ ಶ್ರಮದಾನದ ಕಾರ್ಯಗಳು ,ಸಾಂಸ್ಕೃತಿಕ ಕಾರ್ಯಕ್ರಮಗಳು, ಉಚಿತ ಆಯುಷ್ಯ ಆರೋಗ್ಯ ಚಿಕಿತ್ಸ ಶಿಬಿರ ಜರುಗಲಿವೆ ಶಿಬಿರದಲ್ಲಿ ಪರಪ್ಪ ಸಂಗಪ್ಪ ಸಜ್ಜನ ಕಲಾ ಮಹಾವಿದ್ಯಾಲಯದ 50 ವಿದ್ಯಾರ್ಥಿಗಳು ಶಿಬಿರಾರ್ಥಿಗಳಾಗಿ ಭಾಗವಹಿಸುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top