ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಸೇತುವೆ ಮತ್ತು ಬಾಂದಾರು (ಬ್ರಿಡ್ಜ್ ಕಂ ಬ್ಯಾರೇಜ್) ನಿರ್ಮಾಣ ಕಾರ್ಯ ಬಹುತೇಕ ಪೂರ್ಣಗೊಳ್ಳುವ ಹಂತದಲ್ಲಿದ್ದು ಈವರೆಗೆ ಕ್ರಸ್ಟ್ ಗೇಟ್ ಅಳವಡಿಸದ ಕಾರಣ ಮಳೆಗಾಲದಲ್ಲಿ ನೀರು ವ್ಯರ್ಥ್ಯವಾಗಿ ಹರಿಯುವಂತಾಗಿದೆ ಎಂದು ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ ಆಕ್ರೋಶ ವ್ಯಕ್ತಪಡಿಸಿದರು. ತಾಲ್ಲೂಕಿನ ಬಲುಕುಂದಿ ಮುದೇನೂರು ಗ್ರಾಮದ ಬಳಿ ವೇದಾವತಿ (ಹಗರಿ)ಗೆ ಅಡ್ಡವಾಗಿ ನಿರ್ಮಿಸಲಾಗಿರುವ ಸೇತುವೆ ಮತ್ತು ಬಾಂದಾರ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು. ಈ ಬ್ರಿಡ್ಜ್ ಕಂ ಬ್ಯಾರೇಜ್ ನಿಂದ ಸುಮಾರು 2,5 ರಿಂದ 3 ಟಿ. ಎಂ ಸಿ ನೀರು ನಿಲ್ಲಿಸುವ ಯೋಜನೆಯಾಗಿದೆ. ಆದರೆ ಬಾಂದಾರದ ಕ್ರಸ್ಟ್ ಗೇಟ್ ಎತ್ತರ 4 ಮೀಟರ್ ಇದ್ದು ಇದನ್ನು 5 ಮೀಟರ್ ಗೆ ಎತ್ತರಿಸಬೇಕು. ಇದರಿಂದ 6ಸಾವಿರ ಹೆಕ್ಟೇರ್ ಪ್ರದೇಶದ ರೈತರಿಗೆ ಅನುಕೂಲವಾಗಲಿದೆ ಎಂದು ಆಗ್ರಹಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ