ಬೆಂಗಳೂರು: ಶೇಷಾದ್ರಿಪುರದ ಪ್ಲಾಟ್ ಫಾರ್ಮ್ ರಸ್ತೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀಮಠದ ವಾರ್ಷಿಕೋತ್ಸವ ಹಾಗೂ ಶ್ರೀ ಜಯತೀರ್ಥರ ಆರಾಧನೆ ಪ್ರಯುಕ್ತ ಪ್ರಯುಕ್ತ ಜುಲೈ 25, ಗುರುವಾರ ಬೆಳಗ್ಗೆ ಗುರುಗಳ ಮೃತ್ತಿಕಾ ಬೃಂದಾವನಕ್ಕೆ ಅಷ್ಟೋತ್ತರ ಪಾರಾಯಣ ಸಹಿತ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ಕನಕಾಭಿಷೇಕ, ಶ್ರೀ "ಜಯತೀರ್ಥರ ಮಹಿಮೆ" ವಿಷಯವಾಗಿ ಡಾ|| ವೇಣುಗೋಪಾಲಾಚಾರ್ ಅಗ್ನಿಹೋತ್ರಿ ಇವರಿಂದ ಪ್ರವಚನ, ಮಹಾಮಂಗಳಾರತಿ, ಅಲಂಕಾರ ಪಂಕ್ತಿ ಸೇವಾ ಜರುಗಿದವು. ಸಂಜೆಯ ಕಾರ್ಯಕ್ರಮದಲ್ಲಿ ಅಷ್ಟಾವಧಾನ, ರಥೋತ್ಸವ, ಮಹಾಮಂಗಳಾರತಿ ಕಾರ್ಯಕ್ರಮಗಳು ಜರುಗಿದವು ಎಂದು ಶ್ರೀಮಠದ ವಿಚಾರಣಾಕರ್ತರಾದ ಸುಬ್ಬನರಸಿಂಹ (ಸುಬ್ಬಣ್ಣ) ಅವರು ತಿಳಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ