ಬಳ್ಳಾರಿ: ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆ, ತೋರಣಗಲ್ಲು ಜೆಎಸ್‌ಡಬ್ಲೂ ಫೌಂಡೇಷನ್ ಇವರ ಸಂಯುಕ್ತಾಶ್ರಯದಲ್ಲಿ ‘ಎಜುಕಾನ್ 2024’ ಎರಡು ದಿನಗಳ ಶೈಕ್ಷಣಿಕ ಸಮಾವೇಶವನ್ನು ಆ.01 ಮತ್ತು 02 ರಂದು ಸಂಡೂರು ತಾಲ್ಲೂಕಿನ ತೋರಣಗಲ್ಲಿನ ವಿದ್ಯಾನಗರದಲ್ಲಿ ಏರ್ಪಡಿಸಲಾಗಿದೆ.ಆ.01 ರಂದು ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜಡ್.ಜಮೀರ್ ಅಹ್ಮದ್ ಖಾನ್ ಅವರು ಅವರು ಉದ್ಘಾಟನೆ ಮಾಡುವರು.ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಅಧ್ಯಕ್ಷತೆ ವಹಿಸುವರು.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರು ಹಾಗೂ ಶಾಸಕ ಜೆ.ಎನ್.ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಬಿಎಂ.ನಾಗರಾಜ, ನಾರಾ ಭರತ್ ರೆಡ್ಡಿ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ವಡ್ಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಕೆ.ಎಂ.ನಿಂಗಮ್ಮ ನಾಗರಾಜ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಶಾಲಾ ಶಿಕ್ಷಣ ಇಲಾಖೆಯ ಆಯುಕ್ತ ಬಿ.ಬಿ.ಕಾವೇರಿ, ಸಮಗ್ರ ಶಿಕ್ಷಣ ರಾಜ್ಯ ಯೋಜನಾ ನಿರ್ದೇಶಕ ಕೆ.ಎನ್.ರಮೇಶ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಕಲಬುರಗಿ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ.ಆಕಾಶ್.ಎಸ್., ವಿಜಯನಗರ ಮತ್ತು ಸೇಲಂ ವರ್ಕ್ಸ್ ಜೆಎಸ್‌ಡಬ್ಲೂಂನ ಅಧ್ಯಕ್ಷ ಪಿ.ಕೆ.ಮುರುಗನ್, ಜೆಎಸ್‌ಡಬ್ಲೂಂನ ಫೌಂಡೇಶನ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿನಿ ಸಕ್ಸೇನಾ, ಡಯಟ್ (ಅಭಿವೃದ್ಧಿ) ಉಪನಿರ್ದೇಶಕರಾದ ಹನುಮಕ್ಕ.ಎ., ಶಾಲಾ ಶಿಕ್ಷಣ ಇಲಾಖೆಯ (ಆಡಳಿತ) ಉಪನಿರ್ದೇಶಕರಾದ ಉಮಾದೇವಿ.ಬಿ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ