ಬೆಂಗಳೂರು: ನಗರದಲ್ಲಿ ನೆಲೆಸಿರುವ ಕಾಸರಗೋಡು ಜಿಲ್ಲೆಯ ಜನರ ಸಂಘಟನೆ ವಿಕಾಸ ಟ್ರಸ್ಟ್ ವಾರ್ಷಿಕ ಮಹಾಸಭೆಯು ರಾಷ್ಟ್ರೋತ್ಥಾನ ರಕ್ತ ಕೇಂದ್ರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ನಡೆದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ, ವಿಕಾಸ ಟ್ರಸ್ಟ್ ಹೆಲ್ಪ್ ಲೈನ್ ನಂಬರ್ 97 43 11 77 33 ಲೋಕಾರ್ಪಣೆಗೊಳಿಸಿ ಮಾತನಾಡಿದ ಖ್ಯಾತ ನಟಿ ರೂಪಿಕಾ ಅವರು ರಕ್ತದಾನದ ಮಹತ್ವವನ್ನು ತಿಳಿಸಿ, ವಿಕಾಸ ಟ್ರಸ್ಟ್ ನಡೆಸುತ್ತಿರುವ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿದರು.
ರಾಷ್ಟ್ರೋತ್ಥಾನ ರಕ್ತಕೇಂದ್ರದ ಯೋಜನೆಯಾದ "ಸಂರಕ್ಷ” – ತಲಸ್ಸೆಮಿಯಾ ಡೇ ಕೇರ್ ಸೆಂಟರ್ ಯೋಜನೆಯ ಫಲಾನುಭವಿ ರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಯಿತು. ವಿಕಾಸ ಟ್ರಸ್ಟ್ ಅಧ್ಯಕ್ಷರಾದ ರವಿನಾರಾಯಣ ಗುಣಾಜೆ ಅವರು ಮುಂದಿನ ಕಾರ್ಯಯೋಜನೆ ಕುರಿತು ವಿವರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಟ್ರಸ್ಟಿ ಡಾ. ವಿಠಲ್ ಪ್ರಸಾದ್ ಹಾಗೂ ನೂರಾರು ಸದಸ್ಯರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ