ನಮ್ಮ ಆಚರಣೆಗಳು, ಸಂಸ್ಕೃತಿಯ ಮೇಲೆ ಪ್ರಹಾರ ಮಾಡುವ ವ್ಯವಸ್ಥಿತ ಹುನ್ನಾರ: ಕ್ಯಾಪ್ಟನ್ ಬ್ರಿಜೇಶ್ ಚೌಟ

Upayuktha
0


ಮಂಗಳೂರು: ಶಾಲಾ ಆವರಣ ಮತ್ತು ಮೈದಾನವನ್ನು ಯಾವುದೇ ಶೈಕ್ಷಣಿಕೇತರ ಚಟುವಟಿಕೆಗಳಿಗೆ ಬಳಸುವುದನ್ನು ನಿಷೇಧಿಸಿ ಸುತ್ತೋಲೆ ಹೊರಡಿಸಿರುವ  ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕ್ರಮವನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಖಂಡಿಸಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲೆ ದೈವ ದೇವರ ನಾಡು, ಸಾಂಸ್ಕೃತಿಕ ಹಾಗೂ ದೈವೀಕ ಆಚರಣೆಯನ್ನು ಸದಾ ಮೈಗೂಡಿಸಿಕೊಂಡಿರುವ ನೆಲೆ, ಹಬ್ಬ ಹರಿದಿನಗಳು ಸಮೀಪಿಸುತ್ತಿರುವ ಸಂದರ್ಭದಲ್ಲಿ, ಹಿಂದೂ ಆಚರಣೆಗಳಿಗೆ ತೊಡಕನ್ನು ಉಂಟು ಮಾಡಿ ನಮ್ಮ ಸಂಸ್ಕೃತಿಯ ಮೇಲೆ ಪ್ರಹಾರ ಮಾಡುವ ವ್ಯವಸ್ಥಿತ ಹುನ್ನಾರ ಹಾಗೂ ಕಾಂಗ್ರೆಸ್ ಪಾರ್ಟಿ ಮತ್ತು ಸಿದ್ಧರಾಮಯ್ಯ ಸರಕಾರದ ಹಿಂದೂ ವಿರೋಧಿ ನೀತಿಯ ಮುಂದುವರಿದ ಭಾಗ ಇದಾಗಿದೆ ಎಂದು ಕಟುವಾಗಿ ಟೀಕಿಸಿದ್ದಾರೆ.


ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಹಲವು ಹಗರಣಗಳಲ್ಲಿ ಸಿಕ್ಕಿಹಾಕಿಕೊಂಡಿದ್ದು ಹೊರಬರಲಾಗದೇ ಹೆಣಗಾಡುತ್ತಿದೆ, ಸರ್ಕಾರದ ವಿರುದ್ಧ ರಾಜ್ಯಾಧ್ಯಂತ  ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಯ ದಿಕ್ಕು ತಪ್ಪಿಸಲು ಇಂತಹ ಸಣ್ಣತನ ಪ್ರದರ್ಶಿಸುತ್ತಿದೆ ಎಂದು ಹೇಳಿದರು.


ಹಿಂದುತ್ವದ ಭದ್ರಕೋಟೆಯಲ್ಲಿ ನಿಮ್ಮ ಹಿಂದೂ ವಿರೋಧಿ ಪ್ರಯೋಗಗಳನ್ನು ನಾವು ಹಿಮ್ಮೆಟ್ಟಿಸುತ್ತೇವೆಯೇ ಹೊರತು ಎಂದಿಗೂ ಸಹಿಸುವುದಿಲ್ಲ. ಈ ಕೂಡಲೆ ರಾಜಕೀಯ ಪ್ರೇರಿತ ಆದೇಶವನ್ನು ಹಿಂಪಡೆಯುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Advt Slider:
To Top