ಪ್ರೊ. ಎನ್.ಜಿ ಪಟವರ್ಧನ್ ಅವರ ನಿಧನಕ್ಕೆ ದಕ ಜಿಲ್ಲಾ ಕಸಾಪ ಸಂತಾಪ

Upayuktha
1 minute read
0


ಮಂಗಳೂರು: ನಾಡಿನ ಹಿರಿಯ ಕವಿ, ಸಾಹಿತಿ ಪ್ರೊ. ಎನ್.ಜಿ. ಪಟವರ್ಧನ್ ಅವರ ನಿಧನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ತೀವ್ರ ಸಂತಾಪ ವ್ಯಕ್ತಪಡಿಸಿದೆ.


ಪರಿಷತ್ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ ಅವರು ಈ ಕುರಿತು ನೀಡಿರುವ ಪ್ರಕಟಣೆಯಲ್ಲಿ, ಪ್ರೊ. ಎನ್.ಜಿ. ಪಟವರ್ಧನ್ ಅವರು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಮೂರು ದಶಕಗಳ ಕಾಲ ಕನ್ನಡ ಪ್ರಾಧ್ಯಾಪಕರಾಗಿ, ವಿಭಾಗದ ಮುಖ್ಯಸ್ಥರಾಗಿ ವಿದ್ಯಾರ್ಥಿಗಳ ಪ್ರೀತಿಗೆ ಪಾತ್ರರಾಗಿದ್ದರು. ಅನೇಕ ವಿದ್ಯಾರ್ಥಿಗಳಿಗೆ ಸಾಹಿತ್ಯದ ಅಭಿರುಚಿ ಹುಟ್ಟುವಂತೆ ಮಾಡುವಲ್ಲಿ ಅವರ ಪಾತ್ರ ದೊಡ್ಡದಾಗಿತ್ತು. ಬೆಳ್ತಂಗಡಿ ತಾಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ಅವರಿಗೆ ಪ್ರಾಪ್ತವಾಗಿತ್ತು ಎಂದು ಸ್ಮರಿಸಿಕೊಂಡಿದ್ದಾರೆ.


ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳಿಗೆ ಸದಾ ಮಾರ್ಗದರ್ಶನ ನೀಡುತ್ತಿದ್ದರು. ಈಎಲ್ಲಾ ಹಿನ್ನೆಲೆಯಲ್ಲಿ ನಮ್ಮನ್ನಗಲಿರುವ ಪ್ರೊ. ಎನ್.ಜಿ ಪಟವರ್ಧನ್ ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಿದ್ದೇನೆ ಎಂದು ಡಾ. ಶ್ರೀನಾಥ್ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
To Top