ಧರ್ಮತ್ತಡ್ಕ: ಶ್ರೀ ದುರ್ಗಾಪರಮೇಶ್ವರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಚುನಾವಣೆ

Upayuktha
0

ಧರ್ಮತ್ತಡ್ಕ: ಶ್ರೀ ದುರ್ಗಾಪರಮೇಶ್ವರಿ ಪ್ರೌಢಶಾಲೆ ಧರ್ಮತ್ತಡ್ಕದ ವಿದ್ಯಾರ್ಥಿಗಳಲ್ಲಿ, ಪ್ರಜಾಪ್ರಭುತ್ವ ವ್ಯವಸ್ಥೆಯ ಚುನಾವಣೆ ಪ್ರಕ್ರಿಯೆಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುವುದಕ್ಕಾಗಿ ವಿದ್ಯಾರ್ಥಿ ಸಂಸತ್ ಚುನಾವಣೆ ಗುರುವಾರ ನಡೆಸಲಾಯಿತು.


ಚುನಾವಣೆ ಅಧಿಸೂಚನೆಯ ಮೂಲಕ ಆರಂಭವಾದ ಪ್ರಕ್ರಿಯೆಯು ನಾಮಪತ್ರ ಸಲ್ಲಿಕೆ, ಚುನಾವಣಾ ಪ್ರಚಾರ ನಡೆದು ಬಳಿಕ ಚುನಾವಣೆಯ ದಿನ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಶಿಸ್ತುಬದ್ದವಾಗಿ ಸರತಿ ಸಾಲಿನಲ್ಲಿ ಬಂದು ತಮ್ಮ ಗುರುತು ತಿಳಿಸಿ ಮತವನ್ನು  ಚಲಾಯಿಸಿದರು. ಚುನಾವಣಾ ವೀಕ್ಷಕರಾಗಿದ್ದ ಶಿಕ್ಷಕರ ಸಮ್ಮುಖದಲ್ಲಿ ಅಣಕು ಮತದಾನ ನಡೆಸಿ ನಂತರ ಮತದಾನಕ್ಕೆ ಅವಕಾಶ ಮಾಡಕೊಡಲಾಯಿತು.


ವಿದ್ಯಾರ್ಥಿಗಳು ಪ್ರತ್ಯೇಕ ಸರದಿಯಲ್ಲಿ ನಿಂತು ಶಾಲಾ ಗುರುತಿನ ಚೀಟಿ ಹಿಡಿದು ಮತದಾನದ ಹಕ್ಕು ಚಲಾಯಿಸಿದರು. 675ಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಡಗೈ ತೋರು ಬೆರಳಿಗೆ ಶಾಹಿ ಹಚ್ಚಿಸಿಕೊಂಡು ಮತದಾನ ಮಾಡಿದರು. ಶಾಲಾ ವಿದ್ಯಾರ್ಥಿಗಳು ಮತಗಟ್ಟೆ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸಿದರು. ಸಾರ್ವತ್ರಿಕ ಚುನಾವಣೆಯ ಮಾದರಿಯಲ್ಲಿ ನಡೆದ ಈ ಚುನಾವಣೆಯಲ್ಲಿ ಇವಿಯಂ ಮಾದರಿಯ ಯಂತ್ರವನ್ನು ಪರಿಚಯಿಸಲಾಗಿತ್ತು. ವಿದ್ಯಾರ್ಥಿ ನಾಯಕನಾಗಿ 10ನೇ ತರಗತಿಯ ನೂತನ್ ಎಡಕ್ಕಾನ ಉಪನಾಯಕಿಯಾಗಿ 10ನೇ ತರಗತಿಯ ಡಾನಿಕಾ ಪಹಲ್ ಆಯ್ಕೆಯಾದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top