ಉಜಿರೆ: ಧರ್ಮಸ್ಥಳದಲ್ಲಿ53ನೆ ವರ್ಷದ ಪುರಾಣ ವಾಚನ -ಪ್ರವಚನ ಕಾರ್ಯಕ್ರಮವು ಇದೇ 16ರಿಂದ ಸೆಪ್ಟೆಂಬರ್ 17ರ ವರೆಗೆ ನಡೆಯಲಿದೆ ಎಂದು ಪುರಾಣ ವಾಚನ-ಪ್ರವಚನ ಸಮಿತಿಯ ಸಂಚಾಲಕ ಎ.ವಿ. ಶೆಟ್ಟಿ ತಿಳಿಸಿದ್ದಾರೆ.
ಪ್ರತಿ ದಿನ ಸಂಜೆ ಗಂಟೆ 6:30ರಿಂದ ರಾತ್ರಿ 8ಗಂಟೆ ವರೆಗೆ ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಪುರಾಣ ವಾಚನ - ಪ್ರವಚನ ನಡೆಯಲಿದೆ.ಈ ಬಾರಿ “ಜೈಮಿನಿ ಭಾರತ” ಮತ್ತು “ತುರಂಗ ಭಾರತ” ಕೃತಿಗಳ ವಾಚನ-ಪ್ರವಚನ ನಡೆಯಲಿದ್ದು, ಶನಿವಾರ ಮತ್ತು ಭಾನುವಾರಗಳಲ್ಲಿ ವಿವಿಧ ಕಾವ್ಯಗಳ ಆಯ್ದ ಭಾಗದ ವಾಚನ - ಪ್ರವಚನ ನಡೆಯಲಿದೆ.
ಉದ್ಘಾಟನಾ ಸಮಾರಂಭ: ಜುಲೈ 16ರಂದು ಮಂಗಳವಾರ ಸಂಜೆ ಗಂಟೆ 5.30ಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವೀ. ಹೆಗ್ಗಡೆಯವರು ಪುರಾಣ ವಾಚನ-ಪ್ರವಚನ ಕಾರ್ಯಕ್ರಮವನ್ನು ಉದ್ಘಾಟಿಸುವರು.
ಬಳಿಕ ಜೈಮಿನಿ ಭಾರತದ ಪೀಠಿಕಾಸಂಧಿ ಮತ್ತು ಎರಡನೆ ಸಂಧಿಯನ್ನು ಕಾವ್ಯಶ್ರೀ ಅಜೇರು ವಾಚನ ಮಾಡಿದರೆ, ಹವ್ಯಾಸಿ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಪ್ರವಚನ ನಿಡುವರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ