ಉಜಿರೆ: ಮುಂಡಾಜೆ ಪದವಿಪೂರ್ವ ಕಾಲೇಜು ಮುಂಡಾಜೆ ಇಲ್ಲಿನ ಮಹಿಳಾ ಕೋಶ ಹಾಗೂ ಡಿಜಿಟಲ್ ಸಾಕ್ಷರತಾ ಕ್ಲಬ್ ನ ವತಿಯಿಂದ ನಡೆದ ಡಿಜಿಟಲ್ ಸಾಕ್ಷರತಾ ಕಾರ್ಯಾಗಾರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಕಾಲೇಜಿನ ಉಪನ್ಯಾಸಕ ಕೃಷ್ಣ ಕಿರಣ್ ಕೆ. ಡಿಜಿಟಲೀಕರಣ ವ್ಯವಸ್ಥೆಯ ಬಳಕೆ ಮತ್ತು ಸುರಕ್ಷತೆಯ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಜಾಲಿ ಒ.ಎ. ಇವರು ಮಾತನಾಡಿ, ಕಂಪ್ಯೂಟರ್ ಸಾಕ್ಷರತಾ ವಿಷಯಗಳ ಬಗ್ಗೆ ಎಲ್ಲರೂ ತಿಳಿದಿರಬೇಕು, ಇದು ಇಂದಿನ ಆಧುನಿಕ ಯುಗಕ್ಕೆ ಅತ್ಯಗತ್ಯವಾಗಿದೆ ಎಂದು ತಿಳಿಸಿದರು.
ಮಹಿಳಾ ಕೋಶದ ಮುಖ್ಯಸ್ಥೆ ಹಾಗೂ ಇತಿಹಾಸ ಉಪನ್ಯಾಸಕಿಯಾದ ಶ್ರೀಮತಿ ಗೀತಾ ಇವರು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕಿಯಾದ ಶ್ರೀಮತಿ ವಸಂತಿ ಇವರು ಎಲ್ಲರನ್ನೂ ಸ್ವಾಗತಿಸಿ, ವಿದ್ಯಾರ್ಥಿನಿ ಕುಮಾರಿ ಧನ್ಯ ಕಾರ್ಯಕ್ರಮ ನಿರೂಪಿಸಿ, ವಿದ್ಯಾರ್ಥಿನಿ ಕುಮಾರಿ ಛಾಯಾ ಇವರು ಧನ್ಯವಾದಗೈದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ