ಉಡುಪಿ: ದುಬೈಯಲ್ಲಿ ಕಳೆದ 20 ವರ್ಷಗಳಿಂದ ಅನೇಕ ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಜನಪ್ರಿಯವಾಗಿರುವ ದುಬೈ ಬ್ರಾಹ್ಮಣ ಸಮಾಜವು ತನ್ನ ವಿಂಶತಿ ವರ್ಷಾಚರಣೆಯ ಅಂಗವಾಗಿ ಹಿರಿಯ ಸದಸ್ಯರು ಇಂದು ಶ್ರೀಕೃಷ್ಣಮಠಕ್ಕೆ ಆಗಮಿಸಿ ತಮ್ಮ ಸೇವೆ ಸಲ್ಲಿಸಿ ಪೂಜ್ಯ ಪರ್ಯಾಯ ಶ್ರೀಪಾದರ ಬಳಿ ಅನುಗ್ರಹ ಮಂತ್ರಾಕ್ಷತೆಯನ್ನು ಪಡೆದುಕೊಂಡರು.
ಪೂಜ್ಯ ಶ್ರೀಪಾದರು ಆಶೀರ್ವದಿಸುತ್ತ, ಪರದೇಶದಲ್ಲಿ ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಶ್ರಮಿಸಿದ ಸಂಘದ ಕಾರ್ಯಕರ್ತರನ್ನು ಶ್ಲಾಘಿಸಿ ಎಲ್ಲರಿಗೂ ಶ್ರೀಕೃಷ್ಣ ಮುಖ್ಯಪ್ರಾಣರ ಅನುಗ್ರಹವಿರಲಿ ಎಂದು ಪ್ರಾರ್ಥಿಸಿ ಹರಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ