ಮಂಗಳೂರು: ವಿದ್ಯುತ್ ಸುರಕ್ಷತೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಮೆಸ್ಕಾಂ ಕಾವೂರು ಮತ್ತು ಕೈಕಂಬ ಉಪವಿಭಾಗಗಳ ವತಿಯಿಂದ ಸೋಮವಾರ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.
ಜಾಥಾದೊಂದಿಗೆ ಸಾರ್ವಜನಿಕ ಪ್ರದೇಶಗಳಲ್ಲಿ ವಿದ್ಯುತ್ ಸುರಕ್ಷತೆಯ ಬಗ್ಗೆ ಮಾಹಿತಿ ಭಿತ್ತಿಪತ್ರಗಳನ್ನು ಅಂಟಿಸುವ ಕಾರ್ಯಕ್ರಮವೂ ಜರುಗಿತು.
ಕಾವೂರು ಕಾರ್ಯನಿರ್ವಾಹಕ ಇಂಜಿನಿಯರ್ ಸಂತೋಷ್ ನಾಯಕ್ ಹಾಗೂ ಕೈಕಂಬ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸುನಿಲ್ ಮೊಂತೊರೋ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಾಗೃತಿ ಜಾಥಾವು ಪ್ರಮುಖ ರಸ್ತೆಗಳಲ್ಲಿ ಮುಂಜಾಗ್ರತಾ ಕ್ರಮಗಳ ಕುರಿತು ಧ್ವನಿವರ್ಧಕದ ಮೂಲಕ ಬಿತ್ತರಿಸಲಾಯಿತು. ಬಸ್ ನಿಲ್ದಾಣಗಳು ಸೇರಿದಂತೆ ಸಾರ್ವಜನಿಕ ಪ್ರದೇಶಗಳಲಿ ಭಿತ್ತಿಪತ್ರಗಳನ್ನು ಅಂಟಿಸಲಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ