ಗೋವಾ ಹವ್ಯಕ ವಲಯ ವಾರ್ಷಿಕೋತ್ಸವ, ಸ್ವರ್ಣಪಾದುಕಾ ಪೂಜೆ

Upayuktha
0


ಪಣಜಿ: ಅಶೋಕೆಯ ವಿಷ್ಣುಗುಪ್ತ ವಿಶ್ವವಿದ್ಯಾಲಯವು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಉತ್ತಮ ರೀತಿಯ ಕೊಡುಗೆಯನ್ನು ನೀಡುತ್ತಿದೆ. ಅಲ್ಲಿನ ಶಿಕ್ಷಕ ವರ್ಗ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡುತ್ತಿದೆ ಎಂದು ಡಾ. ಜಯರಾಮ ಭಟ್ ಅವರು ಹೇಳಿದರು. ಅವರು ಇತ್ತೀಚೆಗೆ ಗೋವಾದ ಮಡಗಾಂವ್ ನಲ್ಲಿ ನಡೆದ ಶ್ರೀರಾಮಚಂದ್ರಾಪುರಮಠದ ಶ್ರೀ ರಾಘವೇಶ್ವರ ಶ್ರೀಗಳ ಸ್ವರ್ಣ ಪಾದುಕಾ ಪೂಜೆ, ಗೋವಾ ಹವ್ಯಕ ವಲಯದ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.  


ಮುಖ್ಯ ಪುರೋಹಿತರಾದ ವಿನಾಯಕ ಶಾಸ್ತ್ರಿಗಳು, ವಿಷ್ಣುಗುಪ್ತ ವಿಶ್ವವಿದ್ಯಾಲಯದ ವೈಶಿಷ್ಟ್ಯವನ್ನು ವರ್ಣಿಸಿದರು. ಕುಮಟಾ ಮಂಡಲದ ಅಧ್ಯಕ್ಷರಾದ ಸುಬ್ರಾಯ ಭಟ್ ಹಾಗೂ ಇತರರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಪ್ರಾಚಾರ್ಯರಾಗಿ ನಿವೃತ್ತಿ ಹೊಂದಿದ ಈಶ್ವರ ಹೆಗಡೆ ದಂಪತಿಗಳನ್ನು ಸನ್ಮಾನಿಸಲಾಯಿತು. ಸನ್ಮಾನಿತರಾದ ಈಶ್ವರ ಹೆಗಡೆ ಅವರು ಮಕ್ಕಳಿಗೆ ಕಠಿಣ ಪರಿಶ್ರಮ ಮಾಡುವಂತೆ ಸಲಹೆ ನೀಡಿ ಸ್ವರ್ಣ ಪಾದುಕೆಗಳ ಸಾನ್ನಿಧ್ಯದಲ್ಲಿ ಸನ್ಮಾನ ಸ್ವೀಕರಿಸಿದ್ದಕ್ಕೆ ಸಂತಸವನ್ನು ವ್ಯಕ್ತಪಡಿಸಿದರು.


ಕಳೆದ ಮಾರ್ಚ್ ತಿಂಗಳಲ್ಲಿ 10ನೆಯ ಹಾಗೂ 12 ನೆಯ ತರಗತಿಗಳಲ್ಲಿ ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಯಿತು. ಮಂಡಲಮಟ್ಟದ ಪ್ರತಿಭಾ ಪ್ರದರ್ಶನ ಹಾಗೂ ಕ್ರೀಡೋತ್ಸವದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೂ ಪ್ರಮಾಣ ಪತ್ರ ನೀಡಲಾಯಿತು. ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡಿದ ಎಲ್ಲರಿಗೂ ಪ್ರಮಾಣಪತ್ರ ವಿತರಿಸಲಾಯಿತು. ಗೋವಾ ಹವ್ಯಕ ವಲಯದ ಅಧ್ಯಕ್ಷ ಮಹಾಬಲ ಭಟ್ ಅವರು ಆರಂಭದಲ್ಲಿ ಸಭಾ ಪೂಜೆಯನ್ನು ನೆರವೇರಿಸಿದರು. ಶ್ರೀಪಾದ ಭಟ್ಟ ಅಭಿನಂದನಪತ್ರವನ್ನು ಓದಿದರು. ಗಂಗೂಬಾಯಿ ಭಟ್ ಶರ್ವಾಣಿ ಭಟ್ ಹಾಗೂ ವಾಣಿಶ್ರೀ ಭಟ್ ಇವರು ಕಾರ್ಯಕ್ರಮವನ್ನು ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top