ಪತ್ರಿಕೋದ್ಯಮ ವಿದ್ಯಾರ್ಥಿಗಳು ಭಾಷಾ ಕೌಶಲ್ಯ ಬೆಳೆಸಿಕೊಳ್ಳಬೇಕು: ಭವ್ಯಾ ಪಿ.ಆರ್ ನಿಡ್ಪಳ್ಳಿ

Upayuktha
0




ಪುತ್ತೂರು: 
ಪತ್ರಿಕೋದ್ಯಮ ಕ್ಷೇತ್ರದಲ್ಲಿ ಇಂದು ವಿಫುಲವಾದ ಅವಕಾಶಗಳಿವೆ. ಆದರೆ ಯಶಸ್ವಿ ಪತ್ರಕರ್ತನಾಗಬೇಕೆಂದರೆ ಪತ್ರಿಕೋದ್ಯಮ ವಿದ್ಯಾರ್ಥಿಗಳು ಇಂದಿನಿಂದಲೇ ಅದಕ್ಕೆ ಪೂರಕವಾದ ತರಬೇತಿ ಹಾಗೂ ತಯಾರಿಯನ್ನು ಮಾಡಿಕೊಳ್ಳಬೇಕಿದೆ. ವಿದ್ಯಾರ್ಥಿ ದೆಸೆಯಲ್ಲಿಯೇ ಸಂವಹನ ಕೌಶಲ್ಯ, ಭಾಷಾ ನಿಪುಣತೆ, ಬರವಣಿಗೆ ಶೈಲಿಯನ್ನು ಉತ್ತಮಪಡಿಸಿಕೊಂಡರೆ ಉತ್ತಮ ಪತ್ರಕರ್ತನಾಗಲು ಸಾಧ್ಯ ಎಂದು ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಭವ್ಯಾ.ಪಿ.ಆರ್.ನಿಡ್ಪಳ್ಳಿ ಹೇಳಿದರು.


ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ,ಪತ್ರಿಕೋದ್ಯಮ ಮತ್ತು ಐಕ್ಯೂಎಸಿ ಘಟಕದ ಸಹಯೋಗದಲ್ಲಿ ನಡೆದ ಈ ಸಾಲಿನ ಶೈಕ್ಷಣಿಕ ವರ್ಷದ ಪ್ರಥಮ ಮಣಿಕರ್ಣಿಕ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.


ಈ ಸಂದರ್ಭದಲ್ಲಿ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಹವ್ಯಾಶ್ರೀ ಪಾಲ್ತಾಡಿ ಮಾತನಾಡಿ, ಒಬ್ಬ ವ್ಯಕ್ತಿ ಸಾಧನೆ ಮಾಡುತ್ತಾನೆ ಎಂದಾಗ ನೂರಾರು ಸಮಸ್ಯೆಗಳು ಅವನನ್ನು ಬಾಧಿಸುತ್ತದೆ. ಆದರೆ ವಿದ್ಯಾರ್ಥಿಗಳು ಕಲಿಯುವ ಹಂತದಲ್ಲಿ ಸಮಸ್ಯೆಗಳಿಗೆ ಹೆದರದೆ ಗುರಿ ತಲುಪುವಲ್ಲಿ ಯಶಸ್ವಿಯಾಗಬೇಕು. ಕಲಿಯುವ ಹಂತದಲ್ಲಿ ಎಂದಿಗೂ ಅಹಂಕಾರ ಬೇಡ. ನಮ್ಮ ಸಾಮರ್ಥ್ಯದ ಮೇಲೆ ನಮಗೆ ಭರವಸೆ ಇದ್ದಾಗ ಮಾತ್ರ ಏನನ್ನಾದರೂ ಸಾಧಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.


ಕಾರ‍್ಯಕ್ರಮದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು ಹಾಗೂ ಪತ್ರಿಕೋದ್ಯಮ ವಿಭಾಗಕ್ಕೆ ನೂತನವಾಗಿ ಸೇರ್ಪಡೆಗೊಂಡ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಲೇಖನಿಯನ್ನು ನೀಡಿ ತೃತೀಯ ವರ್ಷದ ವಿದ್ಯಾರ್ಥಿಗಳು ಶುಭಹಾರೈಸಿದರು. ಕಾರ್ಯಕ್ರಮವನ್ನು ತೃತೀಯ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿನಿ, ಕಾರ್ಯಕ್ರಮದ ಕಾರ್ಯದರ್ಶಿ ಲತಾ ಚೆಂಡೆಡ್ಕ ಸ್ವಾಗತಿಸಿ, ಹರ್ಷಿತಾ ಕೆ ವಂದಿಸಿ, ಸಂಶೀನಾ ಸೂರ್ಯ ನಿರ್ವಹಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top