ಉಡುಪಿ: ಆರೋಗ್ಯ ಕಾಪಾಡುವ, ಔಷಧೀಯ ಗುಣವುಳ್ಳ ಹಾಗೂ ವಿನಾಶದ ಅಂಚಿನಲ್ಲಿರುವ ಹಾಲೆಮರಗಳನ್ನು ಉಳಿಸಿ ಬೆಳೆಸಬೇಕಾದ ಅನಿವಾರ್ಯತೆಯಿದೆ ಎಂದು ರೇಡಿಯೋ ಮಣಿಪಾಲ್ ನ ಸಂಯೋಜಕರು ಹಾಗೂ ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನ ಸಹಾಯಕ ಪ್ರಾಧ್ಯಾಪಕಿ ಡಾ. ರಶ್ಮಿ ಅಮ್ಮೆಂಬಳ ಅಭಿಪ್ರಾಯಪಟ್ಟರು.
ಅವರು ಉಡುಪಿ ಪಿತ್ರೋಡಿಯ ಮೊಗವೀರಹಿತ್ಲುವಿನ ಶ್ರೀ ದತ್ತಾತ್ರೇಯ ಭಜನಾ ಮಂಡಳಿ ಮತ್ತು ಶ್ರೀ ದತ್ತಾತ್ರೇಯ ಮಹಿಳಾ ಮಂಡಳಿಯವರು ಆಯೋಜಿಸಿದ 'ಆಟಿಡೊಂಜಿ ದಿನ' ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.
ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ಮಕ್ಕಳು ಪ್ರದರ್ಶಿಸಿದ ಆಟಿಕಳಂಜ ಕುಣಿತ ನೆರೆದವರ ಗಮನ ಸೆಳೆಯಿತು. ಆಟಿ ತಿಂಗಳ ಮಹತ್ವವನ್ನು ಸಾರುವ ವಿವಿಧ ಭಕ್ಷ್ಯಗಳ ಭೋಜನ ವ್ಯವಸ್ಥೆಯನ್ನೂ ಕಲ್ಪಿಸಲಾಗಿತ್ತು. ವೇದಿಕೆಯಲ್ಲಿ ಚೇತನ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಬಿತಾ ಸುರೇಶ್, ರಾಜೇಶ್ ಕುಂದರ್, ಐತಪ್ಪ ಕೋಟ್ಯಾನ್ ಹಾಗೂ ಶ್ರೀ ದತ್ತಾತ್ರೇಯ ಮಹಿಳಾ ಮಂಡಳಿ ಅಧ್ಯಕ್ಷೆ ಹರಿಣಿ ದಿನೇಶ್ ಮೊದಲಾದವರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ