ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು. 18ರಂದು ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕಿನ ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಮಂಗಳೂರು, ಉಳ್ಳಾಲ, ಮೂಡಬಿದಿರೆ, ಮೂಲ್ಕಿ. ತಾಲೂಕು ರಜೆ ಇಲ್ಲ.
ಹವಾಮಾನ ಇಲಾಖೆಯು ಜು.18ರಂದು ರೆಡ್ ಅಲರ್ಟ್ ಘೋಷಿಸಿದೆ. ಈ ವೇಳೆ 204.5 ಮೀ.ಮೀ.ಗೂ ಅಧಿಕ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ ಗಾಳಿಯೂ ಹೆಚ್ಚಿರಲಿದೆ. ಜು.19ರಿಂದ 21ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಜಿಲ್ಲಾಧಿಕಾರಿಗಳು ಅಧಿಕೃತವಾಗಿ ಪ್ರಕಟಿಸುವ ಮೊದಲೇ ನಕಲಿ ಆದೇಶದ ಪ್ರತಿಯೊಂದು ಸಾಮಾಜಿಕ ಜಾಲತಾಗಳಲ್ಲಿ ಹರಡಲಾರಂಭಿಸಿದ್ದು, ಅದು ಜಿಲ್ಲಾಧಿಕಾರಿಗಳ ಗಮನಕ್ಕೂ ಬಂದಿದೆ. ತಕ್ಷಣವೇ ಈ ನಕಲಿ ಆದೇಶದ ಪ್ರತಿಯನ್ನು ಸೃಷ್ಟಿಸಿದವರ ಹಾಗೂ ಹಂಚುವವರ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಪೊಲೀಸ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ