ಮಂಗಳೂರು: ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಜಿಲ್ಲೆಯ ಜನತೆ ಮುನ್ನೆಚ್ಚರಿಕೆ ವಹಿಸುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮನವಿ ಮಾಡಿದ್ದಾರೆ. ಮಳೆಯಿಂದಾಗಿ ಹಲವೆಡೆ ಗುಡ್ಡ ಕುಸಿತ, ರಸ್ತೆ ಬ್ಲಾಕ್, ಮತ್ತು ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದ್ದು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹಾಗೂ ಸ್ಥಳೀಯಾಡಳಿತದ ಸೂಚನೆಗಳನ್ನು ಪಾಲಿಸುವಂತೆ ವಿನಂತಿಸಿದ್ದಾರೆ.
ತುರ್ತು ಸಂದರ್ಭವನ್ನು ಎದುರಿಸಲು ಜಿಲ್ಲಾಡಳಿತ ಸಜ್ಜಾಗಿರುವಂತೆ ಜಿಲ್ಲಾ ಅಧಿಕಾರಿಗಳಿಗೆ ಸಂಸದರು ಸೂಚನೆಯನ್ನು ನೀಡಿರುತ್ತಾರೆ.
ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಕಂಟ್ರೋಲ್ ರೂಂ ಗೆ ಮಾಹಿತಿ ನೀಡಿ ಹಾಗೂ ಹವಾಮಾನ ಮಾಹಿತಿ ಮತ್ತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಹೆಚ್ಚಿನ ಗಮನ ನೀಡುವಂತೆ ಸಂಸದರು ವಿನಂತಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ