ಮುಜುಂಗಾವು: ಮುಜುಂಗಾವು ಶ್ರೀ ಭಾರತಿ ವಿದ್ಯಾಪೀಠದಲ್ಲಿ, ಉದ್ಯಮಿ, ಮುಂಡಪ್ಪಳ್ಳ ಶ್ರೀ ರಾಜರಾಜೇಶ್ವರೀ ದೇವಾಲಯದ ಆಡಳಿತ ಮೊಕ್ತೇಸರ, ಆರ್ಯಭಟ ಪ್ರಶಸ್ತಿ ಪುರಸ್ಕೃತ, ಕೆ.ಕೆ ಶೆಟ್ಟಿ ಇವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಇಂದು (ಜು.12) ನಡೆಸಲಾಯಿತು.
ಕಾರ್ಯಕ್ರಮದಲ್ಲಿ ವಿದ್ಯಾಲಯದ ಸಂಸ್ಕೃತ ಅಧ್ಯಾಪಕ ಬಾಲಕೃಷ್ಣ ಶರ್ಮ ಇವರು ಪ್ರಾಸ್ತಾವಿಕದೊಂದಿಗೆ ಅಭಿನಂದನಾ ನುಡಿಗಳನ್ನಾಡಿದರು. ಆಡಳಿತ ಸಮಿತಿ ಅಧ್ಯಕ್ಷ ಎಸ್.ಎನ್ ರಾವ್ ಮುನ್ನಿಪ್ಪಾಡಿಯವರು ಉದ್ಯಮಿ, ದಾನಿಗಳಾದ ಕೆ.ಕೆ ಶೆಟ್ಟಿ ಇವರನ್ನು ಸನ್ಮಾನಿಸಿದರು. ಕೆ.ಕೆ. ಶೆಟ್ಟಿಯವರು ಮಾತನಾಡುತ್ತಾ "ವಿದ್ಯಾರ್ಥಿಗಳಿಗೆ ಗುರಿ ಇರಬೇಕು ಮತ್ತು ಅದಕ್ಕಾಗಿ ಶ್ರಮಿಸಬೇಕು" ಎಂದು ಕರೆಯಿತ್ತರು.
ಹವ್ಯಕ ಮಹಾಮಂಡಲದ ಮಂಗಳೂರು ಪ್ರಾಂತೀಯ ಉಪಾಧ್ಯಕ್ಷ ಬಾಲಸುಬ್ರಹ್ಮಣ್ಯ ಭಟ್ ಸರ್ಪಮಲೆಯವರು ಕೆ.ಕೆ ಶೆಟ್ಟಿಯವರನ್ನು ಅಭಿನಂದಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ನಿವೃತ್ತ ಪ್ರಾಂಶುಪಾಲ, ಪತ್ರಕರ್ತ ಭಾಸ್ಕರ್ ರೈ ಕುಕ್ಕುವಳ್ಳಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಆರ್ಯಭಟ ಪ್ರಶಸ್ತಿಯ ಹಿರಿಮೆಯನ್ನು ಪ್ರಸ್ತುತ ಪಡಿಸಿದರು.
ಉದ್ಯಮಿ ಕೆ.ಪಿ ರೈ ಕುತ್ತಿಕಾರು, ಆಡಳಿತ ಸಮಿತಿ ಕಾರ್ಯದರ್ಶಿ ಶ್ಯಾಮರಾಜ ದೊಡ್ಡಮಾಣಿ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಬಾಲಸುಬ್ರಹ್ಮಣ್ಯ ಭಟ್ ಚೆಕ್ಕಣಿಕೆ, ಶಾಲಾ ಮುಖ್ಯ ಶಿಕ್ಷಕರಾದ ಶ್ಯಾಮ್ ಭಟ್ ದರ್ಭೆಮಾರ್ಗ, ಹಾಗೂ ಸಹ ಮುಖ್ಯ ಶಿಕ್ಷಕಿ ಶ್ರೀಮತಿ ಚಿತ್ರಾಸರಸ್ವತೀ ಅವರು ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರು ಪ್ರಾರ್ಥನೆಯನ್ನು ಹಾಡಿದರು. ಅಧ್ಯಾಪಕ ಹರಿಪ್ರಸಾದ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಿಕ್ಷಕಿಯರಾದ ಶರಣ್ಯ ಸ್ವಾಗತಿಸಿ ಪುಷ್ಪಲತಾ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ