ಕಲ್ಬುರ್ಗಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಸದಸ್ಯರಾದ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಮಾತೃಶ್ರೀ ಲಚ್ಚು ಪೂಜಾರ್ತಿ (97 ವರ್ಷ) ಅಗಲುವಿಕೆಗೆ ಮಾಜಿ ಸಂಸದ ಡಾ. ಉಮೇಶ್ ಜಾಧವ್ ಮತ್ತು ಮಾಜಿ ಸಚಿವರಾದ ಮಾಲಿಕಯ್ಯ ವಿ ಗುತ್ತೇದಾರ್ ಶೋಕ ವ್ಯಕ್ತಪಡಿಸಿದ್ದಾರೆ.
ಕುಂದಾಪುರ ಸಮೀಪದ ಕೋಟದಲ್ಲಿ ಭಾನುವಾರ (ಜೂನ್ 30ರಂದು) ಸ್ವಗೃಹದಲ್ಲಿ ನಿಧನ ಹೊಂದಿದ ಲಚ್ಚು ಪೂಜಾರ್ತಿಯವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಮೃತರ ಆತ್ಮಕ್ಕೆ ಪರಮಾತ್ಮನು ಚಿರಶಾಂತಿ ಕರುಣಿಸಲಿ ಹಾಗೂ ಅವರ ಕುಟುಂಬದವರಿಗೆ ದುಃಖವನ್ನು ಸಹಿಸುವ ಶಕ್ತಿ ನೀಡಲೆಂದು ಡಾ. ಉಮೇಶ್ ಜಾಧವ್ ಮತ್ತು ಮಾಲಿಕಯ್ಯ ಗುತ್ತೇದಾರ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಸಂತಾಪ:
ಕಲ್ಯಾಣ ಕರ್ನಾಟಕ ಆರ್ಯ ಈಡಿಗ ಹೋರಾಟ ಸಮಿತಿಯ ಅಧ್ಯಕ್ಷರಾದ ಸತೀಶ್ ಗುತ್ತೇದಾರ್, ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಕಡೇಚೂರ್, ಕಲ್ಬುರ್ಗಿ ಜಿಲ್ಲಾ ಹೊಟೇಲ್ ಅಸೋಸಿಯೇಷನ್ ಕಾರ್ಯದರ್ಶಿ ನರಸಿಂಹ ಮೆಂಡನ್, ಆಕಾಶವಾಣಿಯ ನಿವೃತ್ತ ಕಾರ್ಯಕ್ರಮ ನಿರ್ವಹಣಾಧಿಕಾರಿ ಡಾ. ಸದಾನಂದ ಪೆರ್ಲ ಮತ್ತಿತರರು ಕೂಡ ಸಂತಾಪ ವ್ಯಕ್ತಪಡಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ