ಮಂಗಳೂರು: ಚಲನಚಿತ್ರ ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಕನ್ನಡ, ತುಳು ರಂಗಭೂಮಿಗೆ ಅಪಾರ ಸೇವೆ ಸಲ್ಲಿಸಿದ ಸದಾನಂದ ಸುವರ್ಣ ಅವರ ನಿಧನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಪರಿಷತ್ ಅಧ್ಯಕ್ಷ ಡಾ. ಎಂ.ಪಿ ಶ್ರೀನಾಥ್ ಅವರು ಪ್ರಕಟಣೆ ನೀಡಿ, ಸುವರ್ಣರ ಶ್ರೇಷ್ಠ ಕೊಡುಗೆ ಸದಾ ಸ್ಮರಣೀಯ. ಅವರು ಗುಡ್ಡೆದ ಭೂತ ಧಾರಾವಾಹಿಯ ನಿರ್ದೇಶಕರಾಗಿ ಎಲ್ಲರ ಮನ ಗೆದ್ದವರು. ಸ್ವರ್ಣ ಕಮಲ ಪ್ರಶಸ್ತಿ ಪುರಸ್ಕೃತರಾಗಿ ರಂಗ ಭೂಮಿ ಕಲೆಗೆ ತನ್ನನ್ನು ಅರ್ಪಿಸಿಕೊಂಡ ರೀತಿ ಅವರ್ಣನೀಯ. ಇವರ ನಿಧನ ಅತೀವ ದುಃಖ ತಂದಿದೆ .ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಮತ್ತು ಅವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಸ್ಮರಿಸಿಕೊಂಡಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ