ಕಾರ್ಗಿಲ್ ವಿಜಯ ದಿನ: ಭಾರತೀಯರು ಮರೆಯಲಾಗದ ಈ ದಿನಕ್ಕೆ ಇಂದು 25 ವರ್ಷ

Upayuktha
0


"ಕಾರ್ಗಿಲ್ ವಿಜಯ್ ದಿವಸ್". ಪ್ರತಿ ಜುಲೈ 26 ರಂದು ಕಾರ್ಗಿಲ್ ವಿಜಯ್ ದಿವಸ್ ಅಥವಾ ಕಾರ್ಗಿಲ್ ವಿಜಯ ದಿನವನ್ನು ಆಚರಣೆ ಮಾಡಲಾಗುತ್ತದೆ. ಭಾರತೀಯರಿಗೆ ಇದು ಎಂದು ಮರೆಯದ ದಿನವಾಗಿದೆ.


ಕಾರ್ಗಿಲ್‌ ಯುದ್ಧ ಭಾರತೀಯ ಪ್ರತಿಯೋಬ್ಬ ಪ್ರಜೆಯ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ. ಜಮ್ಮು ಕಾಶ್ಮೀರದ ಕಾರ್ಗಿಲ್‌ನಲ್ಲಿ ನಡೆದ ಈ ಯುದ್ಧದಲ್ಲಿ ಪಾಕಿಸ್ತಾನವನ್ನು ನಮ್ಮ ಭಾರತದ ವೀರ ಯೋಧರು ಸದೆ ಬಡೆದು ಅವರು ಆಕ್ರಮಿಸಿಕೊಂಡಿದ್ದ ಜಾಗವನ್ನು ವಶಕ್ಕೆ ಪಡೆದ ದಿನವಾಗಿದೆ.


ಯುದ್ಧದ ಗತಿ:

1999 ಮೇ ತಿಂಗಳಿನಲ್ಲಿ ಆರಂಭವಾದ ಕಾರ್ಗಿಲ್ ಯುದ್ಧ ಜುಲೈ ಅಂತ್ಯದ ತನಕ ಅಂದರೆ ಸುಮಾರು ಎರಡು ತಿಂಗಳ ಕಾಲ ನಡೆಯಿತು. ಈ ಯುದ್ಧದಲ್ಲಿ ಲೇಹ್ ಹೆದ್ದಾರಿಯವರೆಗೆ ನುಗ್ಗಿ ಬಂದಿದ್ದ ಪಾಕ್‌ ಸೇನೆಯನ್ನು ಭಾರತೀಯ ಸೇನೆ ಕೆಚ್ಚೆದೆಯಿಂದ ಯಶಸ್ವಿಯಾಗಿ ಹಿಮ್ಮೆಟ್ಟಿಸಿತ್ತು. ಈ ಯುದ್ಧದಲ್ಲಿ ಭಾರತೀಯ ಸೇನೆಯ ಅಧಿಕಾರಿಗಳು ಸೇರಿದಂತೆ ಸುಮಾರು 527 ಭಾರತೀಯ ಯೋಧರು ಹುತಾತ್ಮರಾದರು.

ಈ ಯುದ್ಧ ನಡೆಯಲು ಮುಖ್ಯ ಕಾರಣ ಪಾಕಿಸ್ತಾನದ ಮೋಸದಾಟ. ಕಾರ್ಗಿಲ್‌ ಪ್ರದೇಶದಲ್ಲಿ ಭಾರತ ಮತ್ತು ಪಾಕಿಸ್ತಾನದ ಲೈನ್‌ ಆಫ್‌ ಕಂಟ್ರೋಲ್‌ (ಎಲ್‌ಒಸಿ) ಇದೆ. ಈ ಪ್ರದೇಶದಲ್ಲಿ ಚಳಿಗಾಲದಲ್ಲಿ ಮೈನಸ್‌ ಡಿಗ್ರಿ ಸೆಲ್ಸಿಯಸ್‌ ಇಳಿಯುತ್ತದೆ. ಇದರಿಂದ ಇಲ್ಲಿ ಗಡಿ ಕಾಯುವುದು ಭಾರತಕ್ಕೆ ಸವಾಲಿನ ಕೆಲಸ. ಚಳಿಗಾಲದಲ್ಲಿ ಭಾರತೀಯ ಸೈನಿಕರು ಮತ್ತು ಪಾಕ್‌ ಸೈನಿಕರು ಇಲ್ಲಿಂದ ಸ್ಥಳಾಂತರಗೊಳ್ಳುತ್ತಾರೆ.


ಚಳಿಗಾಲ ಮುಗಿದ ಬಳಿಕ ಇಲ್ಲಿಗೆ ಮತ್ತೆ ಗಡಿ ಕಾಯುವುದಕ್ಕೆ ಹೋಗುವುದು ಹಿಂದಿನಿಂದ ನಡೆದುಕೊಂಡು ಬಂದ ಪದ್ಧತಿಯಾಗಿತ್ತು. 1999 ರಲ್ಲಿ ಈ ಸಂದರ್ಭವನ್ನೇ ಬಳಸಿಕೊಂಡ ಪಾಕಿಸ್ತಾನ, ಕಾಶ್ಮೀರದ ಹೋರಾಟಗಾರರ ಹೆಸರಿನಲ್ಲಿ ಪಾಕ್‌ ಸೈನಿಕರು, ಭಾರತದ ಪ್ರಮುಖ ಭಾಗಗಳನ್ನು ತನ್ನ ವಶಕ್ಕೆ ಪಡೆದುಕೊಂಡಿತು.


ಆಪರೇಷನ್ ವಿಜಯ ಕಾರ್ಯಾಚರಣೆ:

ಆರಂಭದಲ್ಲಿ ಪಾಕಿಸ್ತಾನೀಯರು ಭಾರತದ ಒಳಗೆ ಸುಮಾರು ದೂರ ನುಸುಳಿದ್ದರು. ಆದರು ಅದು ಭಾರತೀಯ ಸೇನೆಯ ಅರಿವಿಗೆ ಬಂದಿರಲಿಲ್ಲ. ಆದರೆ ಪಾಕಿಸ್ತಾನಿಯರನ್ನು ಕಂಡ ಕಾಶ್ಮೀರದ ಕೆಲವು ಕುರಿಗಾಹಿ ಜನರು, ಭಾರತೀಯ ಸೇನೆಗೆ ವಿಷಯ ಮುಟ್ಟಿಸಿದ್ದರು. ತಕ್ಷಣವೇ ಕಾರ್ಯ ಪ್ರರುತ್ತಾರದ ಸೇನಾಧಿಕಾರಿಗಳು, ಐದು ಯೋಧರನ್ನು ಗಸ್ತು ತಿರುಗಲೆಂದು ಕಳುಹಿಸಿಕೊಟ್ಟರು.


ಆದರೆ ಆಕ್ರಮಣ ಮನಸ್ಥತಿಯಲ್ಲಿದ್ದ ಪಾಕ್‌ನ ಸೇನೆ, ಭಾರತದ ಆ ಐದು ಯೋದರನ್ನು ಚಿತ್ರಹಿಂಸೆ ನೀಡಿ ಕೊಂದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಭಾರತ, ತಕ್ಷಣವೇ ಪಾಕಿಸ್ತಾನಕ್ಕೆ ಪ್ರತ್ಯುತ್ತರ ನೀಡಲು ನಿರ್ಧರಿಸಿತು. ಇದಕ್ಕಾಗಿ ಸೇನೆಯನ್ನು ಸಿದ್ಧಗೊಳಿಸಿತು. ಭಾರತ ಸರ್ಕಾರ 20,000 ಭಾರತೀಯ ಸೈನಿಕರನ್ನು ಸಜ್ಜುಗೊಳಿಸಿ ಮೇ 3 ರಿಂದ ಆಪರೇಷನ್ ವಿಜಯ ಹೆಸರಿನಲ್ಲಿ ಕಾರ್ಯಾಚರಣೆ ಆರಂಭ ಮಾಡಿತು.


ಆಪರೇಷನ್ ಸಫೇದ್‌ ಸಾಗರ್:

ಅತ್ತ ಪಾಕಿಸ್ತಾನವು ಕೂಡಾ ಭಾರತದ ಮೇಲೆ ದಾಳಿ ಮಾಡಲು ಸಕಲ ಸಿದ್ಧತೆ ಮಾಡಿಕೊಂಡಿತ್ತು. ಅದರಂತೆ ಪಾಕ್‌ ಸುಮಾರು 5,000ಕ್ಕೂ ಹೆಚ್ಚು ಸೈನಿಕರನ್ನ ಕಳುಹಿಸಿಕೊಟ್ಟಿತ್ತು. ಇದಕ್ಕೆ ತಕ್ಕ ಉತ್ತರ ನೀಡಲು ಭಾರತೀಯ ಸೇನೆ ಶಸ್ತ್ರಸಜ್ಜಿತವಾಗಿ ಮುನ್ನುಗ್ಗಿತ್ತು. ಎತ್ತರದ ಪ್ರದೇಶದಲ್ಲಿ ಸಾಕಷ್ಟು ಸಮಸ್ಯೆ ಇದ್ದರೂ ಶೆಲ್‌ ದಾಲಿಯ ಮೂಲಕ ಭಾರತೀಯ ಸೇನೆ ಪಾಕಿಸ್ತಾನಿಯ ಬಂಕರ್‌ಗಳತ್ತ ದೃಷ್ಟಿ ಇರಿಸಿತ್ತು. ಭಾರತಕ್ಕೆ ಬೋಫೋರ್ಸ್‌ ಫಿರಂಗಿ, ವಾಯುಪಡೆಯ ಮಿಗ್-27, ಮಿಗ್-29 ಯುದ್ಧ ವಿಮಾನಗಳು ಸಾಕಷ್ಟು ಬಲ ತುಂಬಿದ್ದವು.


ಭಾರತೀಯ ಸೇನೆ, ಪಾಕಿಸ್ತಾನದ ಸೈನಿಕರ ಮೇಲೆ ದಾಳಿ ಮಾಡಲು ಇಂಡಿಯನ್ ಮಿಗ್-21, ಮಿಗ್-27 ಮತ್ತು ಮಿರಾಜ್ 2000 ನಂತಹ ಯುದ್ಧ ವಿಮಾನಗಳನ್ನು ಬಳಸಿತು. ಪಾಕ್‌ ಶತ್ರುಗಳನ್ನು ನಿರ್ಮೂಲನೆ ಮಾಡಲು ಐಎಎಫ್‌ ಯೋಧರು ಈ ವಿಮಾನಗಳಿಂದ ರಾಕೆಟ್ ಮತ್ತು ಕ್ಷಿಪಣಿಗಳನ್ನು ಹಾರಿಸಿದರು.


ಆಪರೇಷನ್ ತಲ್ವಾರ್:

ತೈಲ ಮತ್ತು ಇಂಧನ ಪೂರೈಕೆಯನ್ನು ನಿಲ್ಲಿಸಲು ಯುದ್ಧದ ಸಮಯದಲ್ಲಿ ಪಾಕಿಸ್ತಾನದ ಬಂದರುಗಳನ್ನು ನಿರ್ಬಂಧಿಸಲು ಭಾರತೀಯ ನೌಕಾಪಡೆ 'ಆಪರೇಷನ್ ತಲ್ವಾರ್' ಅನ್ನು ಪ್ರಾರಂಭಿಸಿತು. ಇದರಿಂದಾಗಿ ಪಾಕಿಸ್ತಾನೀಯರ ಸೇನೆಯನ್ನು ಹಿಮ್ಮೆಟ್ಟಿಸುವಲ್ಲಿ ಭಾರತ ಯಶಸ್ವಿಯಾಯಿತು. ಪಾಕಿಸ್ತಾನಿಗಳನ್ನು ಬಗ್ಗು ಬಡಿದ ಭಾರತೀಯ ಸೈನಿಕರು, ಜುಲೈ 24 ರಂದು ಪಾಕಿಗಳನ್ನು ಹಿಮ್ಮೆಟ್ಟಿಸಿ ಭಾರತ ಯುದ್ಧ ಗೆದ್ದಿತು. 


ಬಳಿಕ ಪ್ರತೀ ವರ್ಷ ಜುಲೈ 26 ರಂದು ಕಾರ್ಗಿಲ್‌ ವಿಜಯ ದಿವಸ್‌ ಅನ್ನು ಆಚರಣೆ ಮಾಡಲಾಗುತ್ತದೆ. ಆದರೆ ದೇಶದ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಈ ವಿಜಯ ದಿವಸ್ ಮಾಡಬಾರದು ಎಂದು ಆಗ್ರಹಿಸಿರುವುದು ಸೈನಿಕರಿಗೆ ಮಾಡಿದ ಮೋಸವಾಗಿದೆ.

ಸೈನಿಕರ ಮಾನಸಿಕ ಸ್ಥಿತಿಯನ್ನು ಕುಗ್ಗಿಸುವ ಪ್ರಯತ್ನ ನಿರಂತವಾಗಿ ನಡೆಯುತ್ತಿದೆ ಆದರೂ ನಮ್ಮ ವೀರ ಯೋಧರು ದೇಶದ ಸೇವೆಯನ್ನು ಚಾಚುತಪ್ಪದೆ ಮಾಡುತ್ತಿದ್ದಾರೆ. ನಾವೆಲ್ಲರೂ ಸೈನಿಕರ ಮನೋಬಲ ಹೆಚ್ಚಿಸುವ ಕಾರ್ಯ ನಿರಂತರವಾಗಿ ಮಾಡಬೇಕಾಗಿದೆ..


ಮರೆತು ಹೋದ ಕಾರ್ಗಿಲ್ ದಿನ. ಈ ದಿನವನ್ನು ಶಾಲಾ ಕಾಲೇಜಿನಲ್ಲಿ ಎಲ್ಲಾ ಕಡೆಗಳಲ್ಲಿಯೂ ಮಾಡಬೇಕು ಆದರೆ ಎಷ್ಟೋ ಜನರಿಗೆ ಈ ದಿನ ಮರೆತೇ ಹೋಗಿದೆ. ಸಾಮಾನ್ಯರಿಗೆ ಬಿಡಿ ಸರ್ಕಾರಕ್ಕೆ ಕೂಡ ಮರೆತು ಹೋದ ಪ್ರಸಂಗ ಬಹಳಷ್ಟಿದೆ.


ಈ ದಿನ ನಮ್ಮ ದೇಶದ ಸ್ವಾಭಿಮಾನದ ದಿನವಾಗಲಿ ಎಲ್ಲಾ ಹುತಾತ್ಮ ಸೈನಿಕರಿಗೆ ವೀರ ಸ್ವರ್ಗ ಪ್ರಾಪ್ತಿಯಾಗಲಿ ನಮ್ಮ ದೇಶ ಮತ್ತೊಮ್ಮೆ ವಿಶ್ವ ಗುರುವಾಗಲಿ'


- ರಾಘವೇಂದ್ರ ಪ್ರಭು, ಕರ್ವಾಲು


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top