ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಕಾರ್ಗಿಲ್ ವಿಜಯೋತ್ಸವ

Upayuktha
0

ಮಂಗಳೂರು: ನಂತೂರಿನ ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಕಾರ್ಗಿಲ್ ವಿಜಯೋತ್ಸವ ವಿಜೃಂಭಣೆಯಿಂದ ನಡೆಯಿತು. ಗಣ್ಯರು ದೀಪ ಪ್ರಜ್ವಲಿಸಿ ವೀರಯೋಧರ ಚಿತ್ರಗಳಿಗೆ ಪುಷ್ಪಾರ್ಚನೆಗೈದು ನಮನಗಳನ್ನು ಸಲ್ಲಿಸಿದರು. 


ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಗೃಹರಕ್ಷಕ ದಳದ ಕಮಾಂಡೆಂಟ್ ಡಾ. ಮುರಳೀಮೋಹನ್ ಚೂಂತಾರು ಅವರು, ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಪ್ರಾಣತ್ಯಾಗ ಗೈದ ವೀರ ಯೋಧರನ್ನು ಸ್ಮರಿಸುತ್ತಾ ದೇಶರಕ್ಷಣೆ ಮಾಡುತ್ತಿರುವ ಯೋಧರಿಂದಾಗಿ ನಾವೆಲ್ಲರೂ ನೆಮ್ಮದಿಯಿಂದ ಬದುಕಲು ಸಾಧ್ಯವಾಗಿದೆ, ಆದರೆ ದೇಶ ಉಳಿಸುವ ಜವಾಬ್ದಾರಿ ನಮ್ಮದೂ ಆಗಿರುತ್ತದೆ ಎಂದರು.


ಇನ್ನೊಬ್ಬರು ಮುಖ್ಯ ಅತಿಥಿಗಳಾದ ಹವಾಲ್ದಾರ್ ಕೇಶವ ಬಿ.ಎ ಅವರು, ವಿದ್ಯಾರ್ಥಿಗಳು ದೇಶಸೇವೆಯ ಪುಣ್ಯ ಕೆಲಸದಲ್ಲಿ ಭಾಗಿಗಳಾಗಬೇಕು ಎಂದರು.


ಸಂಸ್ಥೆಯ ಸೇವಾ ಸಮಿತಿಯ ಕಾರ್ಯದರ್ಶಿ ಶ್ರೀಕೃಷ್ಣ ನೀರಮೂಲೆ ಅವರು ವಿದ್ಯಾರ್ಥಿಗಳು ಪ್ರಾಮಾಣಿಕರಾಗಿ ಸಾಧನೆ ಮಾಡುತ್ತಾ ದೇಶಪ್ರೇಮವನ್ನು ಬೆಳೆಸಿಕೊಳ್ಳಬೇಕು ಎಂದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲರಾದ ಗಂಗಾರತ್ನ, ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಯೋಧರನ್ನು ಮಾದರಿಯಾಗಿ ಸ್ವೀಕರಿಸಬೇಕು ಎಂದರು. 


ಈ ಸಂದರ್ಭದಲ್ಲಿ ಗೃಹರಕ್ಷಕ ದಳದ ಅಧಿಕಾರಿಗಳು, ಸಂಸ್ಥೆಯ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ಉಪಸ್ಥಿತರಿದ್ದರು.


ಪದವಿ ಪೂರ್ವ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು ಸಾಲು ಹಣತೆಗಳನ್ನು ಹಚ್ಚಿ ಹುತಾತ್ಮರಾದ ವೀರ ಯೋಧರಿಗೆ ನಮನಗಳನ್ನು ಸಲ್ಲಿಸಿದ ನಂತರ ದೇಶಪ್ರೇಮವನ್ನು ಬಿಂಬಿಸುವ ಭಾಷಣ, ಹಾಡು ನೃತ್ಯಗಳನ್ನು ಪ್ರಸ್ತುತಪಡಿಸಿದರು.


ಉಪನ್ಯಾಸಕಿಯರಾದ ಸಂಗೀತಾ ಮತ್ತು ಸ್ವಾತಿ ಅತಿಥಿಗಳನ್ನು ಪರಿಚಯಿಸಿದರು. ಅಕ್ಷತಾ ಸ್ವಾಗತಿಸಿ ಶ್ರುತಿ ವಂದಿಸಿದರು. ಮೇಘನಾ ನಿರೂಪಣೆಗೈದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top