ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸುಳ್ಯ ತಾಲೂಕಿಗೆ ಭೇಟಿ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

Upayuktha
0

ಪತ್ರಿಕಾ ದಿನಾಚರಣೆ, ಕೆಡಿಪಿ ಸಭೆಯಲ್ಲಿ ಭಾಗಿ, ಸಾರ್ವಜನಿಕ ಅಹವಾಲು ಸ್ವೀಕರಿಸಿ ಅಧಿಕಾರಿಗಳಿಗೆ ಡೆಡ್ ಲೈನ್ ನೀಡಿದ ಸಂಸದರು

ಸಂಸದರ ಕಾರ್ಯವೈಖರಿ ಹಾಗೂ ಜನಸ್ಪಂದನೆ ಸುಳ್ಯದ ನಾಗರಿಕರಲ್ಲಿ ಮೂಡಿಸಿದೆ ಹೊಸ ಭರವಸೆ




ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಸುಳ್ಯ ತಾಲೂಕಿಗೆ ಇಂದು ಭೇಟಿ ನೀಡಿದರು.


ಮೊದಲಿಗೆ ತಾಲೂಕಿನ ಕನ್ನಡ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯಲ್ಲಿ ಭಾಗವಹಿಸಿದ ಸಂಸದರು ಪತ್ರಕರ್ತರು ಪ್ರಜಾಪ್ರಭುತ್ವದ ಎಲ್ಲಾ ಅಂಗಗಳಿಗೆ ಕನ್ನಡಿ ಹಿಡಿದು ಸರಿ ತಪ್ಪುಗಳನ್ನು ಎತ್ತಿ ತೋರಿಸಿ ಸಮಾಜವನ್ನು ತಿದ್ದುವ ಕಾರ್ಯದಲ್ಲಿ ತೊಡಗಿಕೊಂಡಿರುವ ಪತ್ರಿಕೆಗಳು ವರದಿ ಪ್ರಕಟಿಸುವ ವೇಳೆ ಸತ್ಯ, ಧರ್ಮ, ನ್ಯಾಯದ ಅನಾವರಣವಾಗುವಂತಾಗಬೇಕು ಎಂದು ನುಡಿದರು.


ಅನಂತರ ಕೆಡಿಪಿ ಸಭೆಯಲ್ಲಿ ಭಾಗಿಯಾದ ಸಂಸದರು ಪ್ರಗತಿ ಪರಿಶೀಲನಾ ಸಭೆಯ ನಡವಳಿಗೆ ಪಾಲನ ವರದಿಯನ್ನು ಆಲಿಸಿ ಅಧಿಕಾರಿಗಳು ಪ್ರಪ್ರಥಮವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡಬೇಕೆಂದು ಸೂಚಿಸಿದರು. ಸಮಸ್ಯೆಗಳ ಸ್ಪಂದನೆಗೆ ಅಧಿಕಾರಿಗಳು ಯಾವ ರೀತಿ ತಯಾರಿ ನಡೆಸಬೇಕೆಂಬ ಬಗ್ಗೆ ಮಾಹಿತಿ ನೀಡಿ ಈ ಕಾರ್ಯಕ್ರಮಕ್ಕೆ ಭಾಗವಹಿಸಲು ಬೇರೆ ಕಾರ್ಯಕ್ರಮಕ್ಕೆ ಬಂದ ಕಾರಣ ಸಾಧ್ಯವಾಗಿದೆ, ಮುಂದಿನ ದಿನಗಳಲ್ಲಿ ಈ ರೀತಿಯ ಕೆಡಿಪಿ ಸಭೆಗಳಲ್ಲಿ ಭಾಗವಹಿಸಿ ಸಂಪೂರ್ಣ ಮಾಹಿತಿ ಪಡೆಯುವುದಾಗಿ ತಿಳಿಸಿದರು.


ಸುಳ್ಯದ ಆರೋಗ್ಯ ಕೇಂದ್ರಗಳಲ್ಲಿರುವ ವೈದ್ಯರ ಸಮಸ್ಯೆ, ಜಲ್ ಜೀವನ್ ಮಿಷನ್ ಯೋಜನೆಯಡಿ ನಡೆದಿರುವ ಕಾಮಗಾರಿ, ಸುಳ್ಯದ ಅಂಬೇಡ್ಕರ್ ಭವನದ ಕಾಮಗಾರಿಯ ವಿಳಂಬ ಹೀಗೆ ಹಲವು ಬಾಕಿ ಉಳಿದಿರುವ ಕಾಮಗಾರಿ ಹಾಗೂ ಕ್ರಮಗಳನ್ನು ಆದಷ್ಟು ಬೇಗ ನಡೆಸಿಕೊಡಬೇಕೆಂದು ಅಧಿಕಾರಿಗಳಿಗೆ ಸಂಸದರು ಡೆಡ್ ಲೈನ್ ನೀಡಿದರು. ಅಲ್ಲದೆ ಕೆಲವು ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುವ ಮಾರ್ಗದರ್ಶನವನ್ನು ಕೂಡ ನೀಡಿದರು.


ಸಭೆಯಲ್ಲಿ ಡೆಂಗ್ಯೂ ವಿಷಯದ ಬಗ್ಗೆ ಚರ್ಚೆ ನಡೆದಿದ್ದು ಇದನ್ನು ಕೇವಲ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಮಾತ್ರ ಬಿಟ್ಟುಕೊಡದೆ ಎಲ್ಲಾ ಅಧಿಕಾರಿಗಳು ಇದರ ಬಗ್ಗೆ ಗಮನಹರಿಸಿ ಗ್ರಾಮಮಟ್ಟದಲ್ಲಿ ಜನಜಾಗೃತಿ ಗೊಳಿಸುವ ಮತ್ತು ಗ್ರಾಮಗಳಿಂದ ರೋಗಿಗಳ ಕುರಿತು ಮಾಹಿತಿ ಸಂಗ್ರಹಿಸುವ ಕೆಲಸ ಕಾರ್ಯಗಳು ಆಗಬೇಕೆಂದು ಸೂಚಿಸಿದರು. ಜ್ವರದ ಬಗ್ಗೆ ಜನರಿಗೆ ಸೂಕ್ತ ಮಾಹಿತಿ ನೀಡಲು ಹಾಗೂ ಜನರಿಗೆ ತ್ವರಿತ ನೆರವು ಪಡೆಯುವ ನಿಟ್ಟಿನಲ್ಲಿ ಕಾಲ್ ಸೆಂಟರ್ ತೆರೆಯಬೇಕು ಎಂದು ಸಂಸದರು ಹಾಗೂ ಸ್ಥಳೀಯ ಶಾಸಕರಾದ ಭಾಗೀರಥಿ ಮುರುಳ್ಯ ಸೂಚಿಸಿದರು.


ಕೆಡಿಪಿ ಸಭೆ ನಂತರ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ಸಂಸದರು ಎಲ್ಲಾ ಅಹವಾಲುಗಳನ್ನು ಸ್ವೀಕರಿಸಿ ಸಕಾರಾತ್ಮಕವಾಗಿ ಸ್ಪಂದಿಸಿದರು. ಬೆಳ್ಳಾರೆ ಆರೋಗ್ಯ ಕೇಂದ್ರದಲ್ಲಿ ರಾತ್ರಿ ಹೊತ್ತು ವೈದ್ಯರಿಲ್ಲದೆ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು ಅಲ್ಲಿಗೆ ಕಾಯಂ ವೈದ್ಯರ ನೇಮಕವಾಗಬೇಕೆಂದು ಸಾರ್ವಜನಿಕರು ಅಹವಾಲು ನೀಡಿದ್ದು ಇದಕ್ಕೆ ಸ್ಪಂದಿಸಿದ ಸಂಸದರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಆದಷ್ಟು ಬೇಗ ಈ ಸಮಸ್ಯೆಯನ್ನು ಬಗೆಹರಿಸಲು ಸೂಚನೆ ನೀಡಿದರು.


ಒಟ್ಟಾರೆ ಸಂಸದರ ಸುಳ್ಯ ಕ್ಷೇತ್ರದ ಭೇಟಿ ಜನರಿಗೆ ಒಂದು ಹೊಸ ಭರವಸೆಯನ್ನು ಮೂಡಿಸಿದ್ದು ಸಂಸದರು ಕೂಡ ಶಾಸಕರೊಂದಿಗೆ ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸುತ್ತಿದ್ದಾರೆ ಎಂಬುದು ಇದು ಸುಳ್ಯದ ಅಭಿವೃದ್ಧಿಗೆ ಹೊಸ ಮುನ್ನುಡಿಯಾಗಲಿದೆ ಎಂದು ಸಾರ್ವಜನಿಕ ವಲಯದಲ್ಲಿ ಮಾತುಗಳು ಕೇಳಿ ಬರುತ್ತಿವೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top