ರೋಗಗಳು ಹರಡದಂತೆ ಸ್ವಚ್ಚತೆಯನ್ನು ಕಾಪಾಡಿ: ಡಾ. ಪ್ರಶಾಂತ್ ಭಟ್

Upayuktha
0

 


ಉಡುಪಿ:  ಡೆಂಗೀಜ್ವರ, ಮಲೇರಿಯಾ ಜ್ವರ, ಮೆದುಳು ಜ್ವರ ಹರಡುವ ಆರೋಗ್ಯ ಮಾಹಿತಿ ನೀಡಿದ ಅವರು ಸೊಳ್ಳೆ ಉತ್ಪತ್ತಿ ಆಗುವ ತಾಣ ಹಾಗೂ ಉತ್ಪತ್ತಿ ಆಗದಂತೆ ತಡೆಗಟ್ಟುವ ಕುರಿತು ಮುಂಜಾಗೃತೆ ಕ್ರಮ ವಹಿಸಬೇಕು. ಆರೋಗ್ಯಮಂತ್ರಿಗಳು ಮತ್ತು ಆರೋಗ್ಯ ನಿರ್ದೇಶಾನಲಯ ಆದೇಶದಂತೆ ಪ್ರತಿ ಶುಕ್ರವಾರ ಡ್ರೈ ಡೇ ಮಾಡುವಂತೆ ಜಿಲ್ಲಾ ಮಲೇರಿಯಾ ಅಧಿಕಾರಿ  ಡಾ. ಪ್ರಶಾಂತ್ ಭಟ್ ತಿಳಿಸಿದರು.


ಅವರು ಬುಧವಾರ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನುಗಾರರ ಸಹಕಾರ ಸಂಘದ ಸಭಾಂಗಣದಲ್ಲಿ ಬೋಟ್ ಮಾಲೀಕರು, ಮೀನುಗಾರರು, ಮಹಿಳಾ ಮೀನುಗಾರ ಸಂಘ, ಕೊಚ್ಚಿನ್ ಶಿಫ್ ಯಾರ್ಡ್ ಉಡುಪಿ ಹಾಗೂ ಬಂದರಿನ ಇರುವ ವಿವಿಧ ಇತರೆ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಡೆಂಗೀ, ಮಲೇರಿಯಾ, ಚಿಕುನ್ಯಗುನ್ಯಾ, ಮೆದುಳುಜ್ವರ ಹರಡುವ ಬಗ್ಗೆ ಮುಂಜಾಗ್ರತ ಕ್ರಮ ಕೈಕೊಳ್ಳುವ ಕುರಿತ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. 


ಬೋಟ್ ಮಾಲೀಕರಿಗೆ ಬೋಟ್‌ನಲ್ಲಿ ಅಳವಡಿಸುವ ಟೈಯರ್‌ನಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿ ಆಗುವುದರಿಂದ  ಟೈಯರ್ ಬದಲಿಗೆ ರೋಪ್ (ಹಗ್ಗ)ಅಳವಡಿಸಬೇಕು.  ಬೋಟ್‌ನಲ್ಲಿ ಉಪಯೋಗಿಸುವ ಬ್ಯಾರೆಲ್‌ಗಳನ್ನು ಮಗುಚಿ ಹಾಕಬೇಕು ಮತ್ತು ಬಂದರಿನ ಸುತ್ತಮುತ್ತ ನೀರು ನಿಲ್ಲದಂತೆ ಬಂದರಿನ ಪರಿಸರ ಸ್ವಚ್ಛತೆಯನ್ನು ಕಾಪಾಡಬೇಕು ಎಂದರು.


ಒಳನಾಡು ಮತ್ತು ಬಂದರು ಇಲಾಖೆಗೆ ಸಂಬAಧ ಪಟ್ಟಂತಹ ಜಾಗದಲ್ಲಿ ಒಣಮೀನು ತಯಾರಿಸುವ ಸಿಮೆಂಟ್ ತೊಟ್ಟಿಗಳಿಗೆ ಮುಚ್ಚಳ ಅಥವಾ ತಾಡಪಲ್ ಅಳವಡಿಸುವಂತೆ ಮಹಿಳಾ ಮೀನುಗಾರರಿಗೆ ತಿಳಿಸಿದರು.


ಸಭೆಯಲ್ಲಿ ಮೀನುಗಾರರ ಸಹಕಾರ ಸಂಘದ ಅಧ್ಯಕ್ಷ  ದಯಾನಂದ ಸುವರ್ಣ ಮಾತನಾಡಿ, 90%ರಷ್ಟು ಭಾಗ ಬೋಟ್‌ಗಳಿಗೆ ಟೈಯರ್ ತೆಗೆದು ರೋಪ್ ಹಾಕಿದ್ದು, ಇನ್ನೂ ಉಳಿದ ಬೋಟ್‌ಗಳಿಗೂ ರೋಪ್ ಅಳವಡಿಸುವಂತೆ ಸಂಘದ ಮುಖಾಂತರ ಮಾಲೀಕರಿಗೆ ಮಾಹಿತಿ ನೀಡಲಾಗುವುದು ಎಂದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೌರಯುಕ್ತ ರಾಯಪ್ಪ ವಹಿಸಿದರು.


ಕಾರ್ಯಕ್ರಮದಲ್ಲಿ ಮೀನುಗಾರಿಕೆ ಜಂಟಿ ನಿರ್ದೇಶಕ ವಿವೇಕ್, ಮೀನುಗಾರಿಕೆ ಉಪ ನಿರ್ದೇಶಕ ಸವಿತಾ ಖಾದ್ರಿ ಎಸ್ ಕೆ, ಮೀನುಗಾರರ ಸಹಕಾರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ, ಮಲ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈಧ್ಯಾಕಾರಿ ಡಾ. ಜೇಷ್ಮಾ, ಆರೋಗ್ಯ ನಿರೀಕ್ಷಣಾಧಿಕಾರಿ ಮಂಜುನಾಥ ಏನ್, ವಿವಿಧ ಸಂಘಗಳ ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top