ಬಳ್ಳಾರಿ:ರೋಗ ವ್ಯಕ್ತಿಯಲ್ಲಿ ಕಂಡುಬರುವ ಹಿನ್ನಲೆಯಲ್ಲಿ ಸಾರ್ವಜನಿಕರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯಕೀಯ ತಂಡದ ಸಿಬ್ಬಂದಿಯವರು ಮನೆ ಭೇಟಿ ಮಾಡಿದಾಗ ಬಳಕೆಗಾಗಿ ನೀರು ತುಂಬುವ ಡ್ರಮ್ ಬ್ಯಾರೆಲ್, ಸಿಮೆಂಟ್ ತೊಟ್ಟಿ, ಮುಂತಾದವುಗಳನ್ನು ವಾರಕ್ಕೊಮ್ಮೆ ನೀರು ಖಾಲಿ ಮಾಡಿ, ಸ್ವಚ್ಛಗೊಳಿಸಬೇಕು. ನೀರು ತುಂಬಿದ ನಂತರ ಮುಚ್ಚಳ ಮುಚ್ಚುವ ಇಲ್ಲವೇ, ಬಟ್ಟೆಯನ್ನು ಕಟ್ಟಬೇಕು ಎಂದು ತಿಳಿಸಿದರು.
ಈಗಾಗಲೇ ಜಿಲ್ಲಾ ಡಳಿತ ನೀಡಿರುವ ಅಗತ್ಯ ಸಲಹೆ ಸೂಚನೆಗಳ ಅನ್ವಯ ವೈದ್ಯಕಿಯ ತಂಡಗಳು ನರ್ಸಿಂಗ್ ವಿದ್ಯಾರ್ಥಿಗಳ ಮೂಲಕ ತಂಡ ರಚಿಸಿ ಪ್ರತಿ ತಂಡಕ್ಕೆ 100 ಮನೆಯಂತೆ ಸಮೀಕ್ಷೆ ಕೈಗೊಂಡು ಸಾರ್ವಜನಿಕರಿಗೆ ಜಾಗೃತಿ ನೀಡುವ ಕಾರ್ಯ ನಡೆಯುತ್ತಿದೆ ಎಂದರು.
ಕೇವಲ ಮನೆಗಳಲ್ಲಿ ಮಾತ್ರವಲ್ಲದೇ ಶಾಲೆ, ಅಂಗನವಾಡಿಗಳು, ವಾಣಿಜ್ಯ ಮಳಿಗೆಗಳಲ್ಲಿ ನೀರು ಸಂಗ್ರಹಾರಕಗಳನ್ನು ಪರಿಶೀಲಿಸಿ, ಲಾರ್ವಾ ಕಂಡುಬಂದಲ್ಲಿ ಟೆಮೋಫಾಸ್ ದ್ರಾವಣವನ್ನು ಬಳಕೆಗಾಗಿ ನೀರು ತುಂಬುವ ಪರಿಕರಗಳಿಗೆ ಸಾರ್ವಜನಿಕರಿಗೆ ಮಾಹಿತಿ ನೀಡಿ ಹಾಕಲು ಸೂಚಿಸಿಲಾಗಿದೆ ಎಂದರು.
ಹಗಲು ಹೊತ್ತಿನಲ್ಲಿ ಕಚ್ಚುವ ಸೊಳ್ಳೆ ಇದಾಗಿರುವುದರಿಂದ ಹಗಲು ಹೊತ್ತಿನಲ್ಲಿ ವಿಶ್ರಾಂತಿ ಪಡೆಯುವ ಮಕ್ಕಳು, ವಯೋವೃದ್ದರು, ಗರ್ಭಿಣಿಯರು ಸೇರಿದಂತೆ ಇತರರು ಮೈತುಂಬ ಬಟ್ಟೆ ಧರಿಸಬೇಕು. ಅಗತ್ಯವೆನಿಸಿದರೆ ಸೊಳ್ಳೆ ಪರದೆ ಬಳಸಲು ಸೂಚಿಸಬೇಕು. ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಔಷಧ ದಾಸ್ತಾನು ಲಭ್ಯವಿದ್ದು, ಕುಟುಂಬದ ಸದಸ್ಯರಲ್ಲಿ ಯಾರಿಗಾದರೂ ಜ್ವರ ಕಂಡು ಬಂದಲ್ಲಿ ತಕ್ಷಣವೇ ಹತ್ತಿರದ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಬೇಕು ಎಂದು ತಿಳಿಸಿದರು.
ಈ ವೇಳೆ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ, ಜಿಲ್ಲಾ ಕಿಟಶಾಸ್ತ್ರಜ್ಞೆ ಡಾ.ನಂದಾ ಕಡಿ, ಡಾ.ಶರತ್ ಸೇರಿದಂತೆ ನರ್ಸಿಂಗ್ ವಿದ್ಯಾರ್ಥಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಜರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ