ಮಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಹಿರಿಯ ಸಾಹಿತಿಗಳ ಮನೆ ಭೇಟಿ ಕಾರ್ಯಕ್ರಮದಡಿಯಲ್ಲಿ 96 ವರ್ಷದ ಹಿರಿಯ ಸಾಹಿತಿ ಲಲಿತಾ ರೈ ಅವರನ್ನು ಭೇಟಿ ಮಾಡಿ ಯೋಗ ಕ್ಷೇಮ ವಿಚಾರಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ, ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಮಾರ್ಗದರ್ಶನ ಸಮಿತಿಯ ಸದಸ್ಯ ಡಾ.ಮುರಲಿ ಮೋಹನ್ ಚೂಂತಾರು, ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಂಜುನಾಥ್ ಎಸ್ ರೇವಣಕರ್, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸದಸ್ಯರಾದ ಸನತ್ ಕುಮಾರ್ ಜೈನ್, ವಿದ್ಯಾರ್ಥಿ ಮಹೇಂದ್ರ ಹಡಗಲಿ ಭೇಟಿಯಾಗಿದ್ದರು. ಆ ಸಂದರ್ಭದಲ್ಲಿ ಅವರ ಮಗಳು ಕೃಪಾ ರೈ ಮತ್ತು ಅಳಿಯ ಆನಂದ ಶೆಟ್ಟಿ ಜೊತೆಗೆ ಇದ್ದರು.
ಲಲಿತ ರೈ ಅವರ ಬಾಲ್ಯದ ಜೀವನದ ಬಗ್ಗೆ, ತಮ್ಮ ಮೂರು ದಶಕಗಳಿಗಿಂತಲೂ ಹೆಚ್ಚು ಕಾಲ ತಮ್ಮ ಬೋಧನಾ ಅನುಭವಗಳನ್ನು ಹಂಚಿಕೊಂಡರು. ತಮ್ಮ ಸಾಹಿತ್ಯ ಮತ್ತು ಜೀವನಾನುಭವಗಳನ್ನು ಸವಿಸ್ತಾರವಾಗಿ ವಿವರಿಸಿದರು. ಪ್ರಪಂಚದ ಎಲ್ಲ ಭಾಗಗಳಿಗೂ ಕೂಡ ನಾನು ಪ್ರವಾಸ ಮಾಡಿದ್ದೇನೆ.ಅದರ ಅನುಭವ ನನಗೆ ಇದೆ. ಇಂದಿನ ವಿದ್ಯಾರ್ಥಿಗಳು ಮತ್ತು ಯುವ ಜನರು ಹೆಚ್ಚೆಚ್ಚು ಸಾಹಿತ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.
ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಶಿಕ್ಷಣಕ್ಕೆ ಹೆಚ್ಚಿನ ಗಮನ ಹರಿಸಬೇಕು .ಮಾತೃ ಭಾಷೆಯ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ನೀಡಬೇಕು ಎಂದು ಹೇಳಿದರು.
ಸುಮಾರು 45 ನಿಮಿಷಗಳ ಕಾಲ ಅವರ ಜೊತೆ ಅವರ ಅನುಭವಗಳನ್ನು ಹಂಚಿಕೊಂಡಾಗ ಅವರಲ್ಲಿ ಜೀವನೋತ್ಸಾಹ ಕಾಣುತ್ತಿತ್ತು .
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ