ಸ್ಕೇಟಿಂಗ್ ಸಾಧಕರಿಗೆ ಸನ್ಮಾನ

Upayuktha
0

ಶಿಕ್ಷಣದ ಜತೆಗೆ ಕ್ರೀಡೆಗೂ ಆದ್ಯತೆ: ಮುಡಾ ಆಯುಕ್ತೆ ನೂರ್ ಜಹರ ಖಾನಂ ಆಶಯ



ಮಂಗಳೂರು: ಮಕ್ಕಳ ದೈಹಿಕ ಮಾನಸಿಕ ಬೆಳವಣಿಗೆಯಲ್ಲಿ ಕ್ರೀಡೆ ಮಹತ್ವದ ಪಾತ್ರ ವಹಿಸುತ್ತದೆ. ಶಿಕ್ಷಣದ ಜತೆಗೆ ಕ್ರೀಡೆಗೂ ಆದ್ಯತೆ ನೀಡಬೇಕು. ಮಕ್ಕಳಲ್ಲಿ ಇರುವ ಕ್ರೀಡಾ ಪ್ರತಿಭೆಯನ್ನು ಪೋಷಕರು ಗುರುತಿಸಿ ಪ್ರೋತ್ಸಾಹ ನೀಡಿದರೆ ಮಾತ್ರ ಕ್ರೀಡಾ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯ ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತೆ ನೂರ್ ಜಹರ ಖಾನಂ ಹೇಳಿದರು.


ನಗರದ ಬೆಂದೂರ್‌ನ ಸೆಬಾಸ್ಟಿಯನ್ ಹಾಲ್‌ನಲ್ಲಿ ನಡೆದ ಹೈ ಫ್ಲೈಯರ್ಸ್‌ ಸ್ಕೇಟಿಂಗ್ ಕ್ಲಬ್ ಇದರ ವಾರ್ಷಿಕ ದಿನಾಚರಣೆ ಹಾಗೂ ರೋಲರ್ ಸ್ಕೇಟಿಂಗ್ ಫೆಡರೇಶನ್ ಆಫ್ ಇಂಡಿಯಾ (ಆರ್‌ಎಸ್‌ಎಫ್‌ಐ)ದ ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ದೈಹಿಕ ಶಿಕ್ಷಣ ಶಿಕ್ಷಕ್ಷರ ಸಂಘದ ಜಿಲ್ಲಾಧ್ಯಕ್ಷೆ ಲಿಲ್ಲಿ ಪಾಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಆರ್‌ಎಸ್‌ಎಫ್‌ಐ ರಾಷ್ಟ್ರೀಯ ಮಟ್ಟದ ಸಾಧಕರಾದ ಶಾಮಿಲ್, ಅರ್ಪಿತಾ, ಡಾಶಿಯಲ್, ಮೋಕ್ಷ, ಡೇನಿಯಲ್ ಮತ್ತು ಆರ್‌ಎಸ್‌ಎಫ್‌ಐ ಮಟ್ಟದ ಸಾಧಕರಾದ ಹಿಮಾನಿ, ಕೇಟ್, ತನ್ಮಯ್ ಮತ್ತು ವಿವೇಕ್ ಇವರುಗಳಿಗೆ ಚಿನ್ನ ಮತ್ತು ಬೆಳ್ಳಿ ನಾಣ್ಯಗಳನ್ನು ನೀಡಿ ಗೌರವಿಸಲಾಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top