ಮಂಗಳೂರು: ಲೈಟ್‌ಹೌಸ್ ಹಿಲ್ ರೋಡ್ ಫೀಡರ್ ಮಾರ್ಗ ವ್ಯಾಪ್ತಿಯ ವಿವಿಧೆಡೆ ಜು. 5ರ೦ದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಕದ್ರಿ 33/11ಕೆ.ವಿ. ಉಪಕೇಂದ್ರದಿಂದ ಹೊರಡುವ 11 ಕೆ.ವಿ. ಲೈಟ್‌ಹೌಸ್ ಹಿಲ್ ರೋಡ್ ಫೀಡರ್‌ನಲ್ಲಿ ಅಂದು ಬೆಳಗ್ಗೆ 10 ರಿಂದ ಸಂಜೆ ಸಂಜೆ 4 ಗಂಟೆಯವರೆಗೆ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಬಂಟ್ಸ್ ಹಾಸ್ಟೆಲ್, ಜ್ಯೋತಿ, ಲೈಟ್ ಹೌಸ್ ಹಿಲ್ ರೋಡ್, ವುಡ್ ಲ್ಯಾಂಡ್, ಗೋಲ್ಡ್ ಫಿಂಚ್, ಜ್ಯೋತಿ ಟಾಕೀಸ್, ಲೇಡಿಸ್ ಕ್ಲಬ್, ಸೈಂಟ್ ಅಲೋಶಿಯಸ್ ಕಾಲೇಜ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ