ಅಗಲಿದ ಪತ್ರಕರ್ತರಿಗೆ ಪತ್ರಿಕಾ ಭವನದಲ್ಲಿ ಶ್ರದ್ಧಾಂಜಲಿ ಸಭೆ

Upayuktha
0


ಮಂಗಳೂರು: ಇತ್ತೀಚೆಗೆ ನಿಧನರಾದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾದ ಹಿರಿಯ ಫೋಟೊ ಜರ್ನಲಿಸ್ಟ್ ಅಲ್ಪ್ಪ್ರೆಡ್ ಡಿಸೋಜ ಮತ್ತು ಖಾಸಗಿ ಟಿ.ವಿ.ಯ ಕ್ಯಾಮರಾಮನ್ ವೀರೇಶ್ ಕಡ್ಲಿಕೊಪ್ಪ ಅವರಿಗೆ ಶ್ರದ್ಧಾಂಜಲಿ ಸಭೆ ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆಯಿತು. ಅಗಲಿದ ಪತ್ರಕರ್ತರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.


ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮಾತನಾಡಿ, ಅಗಲಿದ ಇಬ್ಬರೂ ಪತ್ರಕರ್ತರೂ ಸಜ್ಜನ ವ್ಯಕ್ತಿತ್ವ ಹೊಂದಿದ್ದರು. ಎಲ್ಲರ ಜತೆ ಮುಕ್ತವಾಗಿ ಬೆರೆಯುತ್ತಿದ್ದರು.  ಅವರ ಹೆಸರನ್ನು ಶಾಶ್ವತವಾಗಿ ನೆನಪಿಸಿಕೊಳ್ಳುವ ನಿಟ್ಟಿನಲ್ಲಿ ಸಂಘ ಕಾರ್ಯೋನ್ಮುಖವಾಗಲಿದೆ ಎಂದರು.


ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಮಾತನಾಡಿ, ವೀರೇಶ್ ಅವರು ಗದಗ್ ಜಿಲ್ಲೆಯಿಂದ ಮಂಗಳೂರಿಗೆ ಆಗಮಿಸಿ ಇಲ್ಲಿನ ಪತ್ರಕರ್ತರ ಜತೆ ಬೆರೆತು ಕೆಲಸ ಮಾಡಿದ್ದರು. ಕಿರಿಯ ವಯಸ್ಸಿನಲ್ಲಿ ಅವರು ಅಗಲಿರುವುದು ಆಘಾತ ತಂದಿದೆ ಎಂದರು.


ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕಾರ್ಯಕಾರಿ ಸಮಿತಿ ಸದಸ್ಯ ಭರತ್ ರಾಜ್, ಉಮೇಶ್ ಕೊಟ್ಟಾರಿ, ಆದಿತ್ಯ ನುಡಿನಮನ ಸಲ್ಲಿಸಿದರು.


ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ.ಆರ್., ಪ್ರೆಸ್‌ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಹಿರಿಯ ಪತ್ರಕರ್ತರಾದ ರಮೇಶ್ ಪೆರ್ಲ, ನಂದಗೋಪಾಲ್ ಉಪಸ್ಥಿತರಿದ್ದರು.


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top