ಮಣಿಪಾಲ: ಸರಿಗಮ ಭಾರತಿ ಸಂಗೀತ ವಿದ್ಯಾಲಯ ಪರ್ಕಳ ಇದರ 25ನೇ ವರ್ಷಾಚರಣೆ ಅಂಗವಾಗಿ "ರಜತ ಸಂಭ್ರಮ' ಕಾರ್ಯಕ್ರಮ ಆ. 1ರಂದು ಗುರುವಾರ ನಡೆಯಲಿದೆ.
ಉಡುಪಿಯ ಯಕ್ಷಗಾನ ಕಲಾರಂಗ- ಇನ್ಫೋಸಿಸ್ ಫೌಂಡೇಶನ್ (ಐವೈಸಿ) ಸಭಾಂಗಣದಲ್ಲಿ ಅಂದು ಸಂಜೆ 4.45ಕ್ಕೆ ಕಾರ್ಯಕ್ರಮ ಆರಂಭಗೊಳ್ಳಲಿದೆ. ಕೆ.ಆರ್. ರಾಘವೇಂದ್ರ ಆಚಾರ್ಯ ಮಣಿಪಾಲ ಅವರು ಪ್ರಾರ್ಥನ ಸ್ತುತಿ ಪ್ರಸ್ತುತ ಪಡಿಸಲಿದ್ದಾರೆ. ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ| ಗಣೇಶ್ ಕಾರ್ಣಿಕ್ ಉದ್ಘಾಟನೆ ನೆರವೇರಿಸಲಿದ್ದು, ಉಡುಪಿಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ. ಇದೇ ವೇಳೆ ಕಲಾ ಪೋಷಕರಾದ ಪ್ರೊ| ಕೆ. ಸದಾಶಿವ ರಾವ್ ಅವರಿಗೆ ಗೌರವಾರ್ಪಣೆ ನಡೆಯಲಿದೆ. ಉಡುಪಿ ಯಕ್ಷಗಾನ ಕಲಾರಂಗದ ಸಹಕಾರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಬಳಿಕ ಕೆ.ಎಸ್. ವಿಷ್ಣುದೇವ್ ಅವರಿಂದ ಕರ್ನಾಟಕ ಸಂಗೀತ ಕಛೇರಿ ನಡೆಯಲಿದ್ದು, ವಯೊಲಿನ್‌ನಲ್ಲಿ ವಿ.ಎಸ್. ಗೋಕುಲ್ ಆಲಂಗೋಡೆ, ಮೃದಂಗದಲ್ಲಿ ಸುನಾದ ಕೃಷ್ಣ ಅಮೈ, ಘಟಂನಲ್ಲಿ ಶ್ರೀಜಿತ್ ವೆಲ್ಲತ್ತಂಜೂರ್ ಸಹಕರಿಸಲಿದ್ದಾರೆ ಎಂದು ಸರಿಗಮ ಭಾರತಿ ಸಂಗೀತ ವಿದ್ಯಾಲಯದ ಗುರು ಉಮಾಶಂಕರಿ, ವಿದ್ಯಾಲಯದ ನಿರ್ದೇಶಕ ಡಾ| ಉದಯಶಂಕರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ