ನಿಟ್ಟೆ ಆಫ್ ಕ್ಯಾಂಪಸ್ ಸೆಂಟರ್ ನ ತೃತೀಯ ಬ್ಯಾಚ್ ನ ಉದ್ಘಾಟನೆ

Upayuktha
0




ನಿಟ್ಟೆ:
ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲೊಂದಾದ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಆಫ್ ಕ್ಯಾಂಪಸ್ ಸೆಂಟರ್ ನ ವಿದ್ಯಾಸಂಸ್ಥೆಗಳಲ್ಲೊಂದಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಬಿ.ಟೆಕ್ ಕೋರ್ಸ್ ಗಳಿಗೆ 2024 ನೇ ಸಾಲಿನಲ್ಲಿ ಪ್ರವೇಶಾತಿ ಪಡೆದ ನೂತನ ಬ್ಯಾಚ್ ನ ಉದ್ಘಾಟನಾ ಕಾರ್ಯಕ್ರಮವು ಜು.15 ರಂದು ನಿಟ್ಟೆಯ ಸದಾನಂದ ಸಭಾಂಗಣದಲ್ಲಿ ಜರುಗಿತು


ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್.ವಿನಯ ಹೆಗ್ಡೆ ಅವರು ವಿದ್ಯಾರ್ಥಿಗಳನ್ನು ಹಾಗೂ ಪೋ‍ಷಕರನ್ನು ಉದ್ದೇಶಿಸಿ ಮಾತನಾಡಿದರು. 'ಇಂದಿನ ದಿನಗಳಲ್ಲಿ ಅಗತ್ಯತೆಗೆ ತಕ್ಕಂತೆ ವಿದ್ಯಾರ್ಥಿಗಳು ಕೌಶಲ್ಯತೆಯನ್ನು ಬೆಳೆಸಿಕೊಂಡು ಉದ್ಯೋಗಾವಕಾಶಗಳನ್ನು ಹೆಚ್ಚಿಸಿಕೊಳ್ಳಬೇಕು. ನಿಟ್ಟೆ ವಿದ್ಯಾಸಂಸ್ಥೆಯು ವಿದ್ಯಾರ್ಥಿಗಳನ್ನು ಈ ದೃಷ್ಠಿಯಲ್ಲಿ ಸಜ್ಜುಗೊಳಿಸಲು ಸದಾ ಕಾರ್ಯಪ್ರವೃತ್ತವಾಗಿರುತ್ತದೆ. ತಾಂತ್ರಿಕ ಶಿಕ್ಷಣದೊಂದಿಗೆ ದೈಹಿಕ ಆರೋಗ್ಯ ಹಾಗೂ ಮಾನಸಿಕ ನೆಮ್ಮದಿ ವೃದ್ದಿಯ ಹಿನ್ನಲೆಯಲ್ಲಿ ಕ್ರೀಡೆ ಹಾಗೂ ಸಾಂಸ್ಕೃತಿಕ ವಿಷಯಗಳಿಗೂ ಸಮಾನ ಮಹತ್ವವನ್ನು ನೀಡುವುದು ಮುಖ್ಯ' ಎಂದು ಅವರು ಹೇಳಿದರು.


ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ವೈಸ್-ಚಾನ್ಸಲರ್ ಡಾ.ಎಂ.ಎಸ್.ಮೂಡಿತ್ತಾಯ ಸಭೆಯನ್ನುದ್ದೇಶಿಸಿ ಮಾತನಾಡಿ, ಸಂಸ್ಥೆಯಲ್ಲಿರುವ ವಿವಿಧ ಸೌಲಭ್ಯಗಳ ಬಗೆಗೆ ತಿಳಿಸಿದರು. ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ತಾಂತ್ರಿಕ ಶಿಕ್ಷಣ ವಿಭಾಗದ ಉಪಾಧ್ಯಕ್ಷ ಪ್ರೊ .ಡಾ. ಗೋಪಾಲ್ ಮುಗೇರಾಯ ಅವರು ಮಾತನಾಡಿ, ನಿಟ್ಟೆ ವಿದ್ಯಾಸಂಸ್ಥೆಯ ಇತಿಹಾಸ, ಬೆಳೆದುಬಂದ ಹಾದಿಯ ಬಗೆಗೆ ನೂತನ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿವರಿಸಿದರು. ನಿಟ್ಟೆ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದ ಕುಲಸಚಿವ ಡಾ.ಹರ್ಷ ಹಾಲಹಳ್ಳಿ ಮಾತನಾಡಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಕಾಲೇಜಿನ ವಾರ್ಷಿಕ ಮ್ಯಾಗಜಿನ್ 'ನಿದರ್ಶನ'ವನ್ನು ಎನ್. ವಿನಯ ಹೆಗ್ಡೆಯವರು ಬಿಡುಗಡೆಗೊಳಿಸಿದರು.


ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ನಿರಂಜನ್ ಎನ್ ಚಿಪ್ಳೂಣ್ಕರ್ ಸ್ವಾಗತಿಸಿದರು. ಇನ್ಫೋರ್ಮೇಶನ್ ಸೈನ್ಸ್ ವಿಭಾಗದ ಪ್ರಾಧ್ಯಾಪಕಿ ಹಾಗೂ ಸ್ಟೂಡೆಂಟ್ ಇಂಡಕ್ಷನ್ ಕಾರ್ಯಕ್ರಮದ ಮುಖ್ಯಸ್ಥೆ ಡಾ. ಕರುಣಾ ಪಂಡಿತ್ ವಂದಿಸಿದರು. ಬಯೋಟೆಕ್ನಾಲಜಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಹರ್ಷಿತಾ ಜತ್ತನ್ನ ಕಾರ್ಯಕ್ರಮ ನಿರೂಪಿಸಿದರು.


ಸಭಾ ಕಾರ್ಯಕ್ರಮದ ಅನಂತರ ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ.ನಿರಂಜನ್ ಎನ್ ಚಿಪ್ಳೂಣ್ಕರ್ ಅವರು ನಿಟ್ಟೆ ಸಮೂಹ ಸಂಸ್ಥೆಯ ಹಾಗೂ ಅದು ಬೆಳೆದು ಬಂದ ಹಾದಿಯ ಬಗೆಗೆ ಮಾತನಾಡಿದರು. ಅಪರಾಹ್ನ 'ಟೀನ್ ಪೇರೆಂಟಿಂಗ್- ಜಾಯ್ ಆರ್ ಸ್ಟ್ರೆಸ್' ಎಂಬ ವಿಷಯದ ಬಗೆಗೆ ಡಾ. ವಿರೂಪಾಕ್ಷ ದೇವರಮನೆಯವರು ಕಾರ್ಯಕ್ರಮ ನಡೆಸಿಕೊಟ್ಟರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  


Post a Comment

0 Comments
Post a Comment (0)
To Top