ಮಂಜೇಶ್ವರ: ದೇಶೀಯ ಅಧ್ಯಾಪಕ ಪರಿಷತ್ ಎನ್ ಟಿ ಯು ಮಂಜೇಶ್ವರ ಉಪಜಿಲ್ಲಾ ಸಮಿತಿ ವತಿಯಿಂದ ಮಂಜೇಶ್ವರ ಸಹಾಯಕ ಶಿಕ್ಷಣಾಧಿಕಾರಿಗಳ ಕಚೇರಿಯ ಮುಂದೆ ಶಿಕ್ಷಣ ಕಾಯಿದೆಯನ್ನು ವಿರೋಧಿಸಿ ಪ್ರಕಟಿಸಿದ ಶೈಕ್ಷಣಿಕ ಕ್ಯಾಲೆಂಡರ್ ನ್ನು ವಿರೋಧಿಸಿ ಪ್ರತಿಭಟನಾ ಧರಣಿಯನ್ನು ನಡೆಸಲಾಯಿತು. ಎನ್ ಟಿ ಯು ರಾಜ್ಯ ಸಮಿತಿ ಸದಸ್ಯರಾದ ಅರವಿಂದಾಕ್ಷ ಭಂಡಾರಿ ಧರಣಿಯನ್ನು ಔಪಚಾರಿಕವಾಗಿ ಉದ್ಘಾಟಿಸಿ ಮಾತನಾಡಿದರು.
ಎನ್ ಟಿ ಯು ರಾಜ್ಯ ಸಮಿತಿ ಸದಸ್ಯರಾದ ಸತೀಶ್ ಶೆಟ್ಟಿ ಒಡ್ಡಂಬೆಟ್ಟು ಧರಣಿಯ ಉದ್ದೇಶವನ್ನು ಹಾಗೂ ಅವಶ್ಯಕತೆಯನ್ನು ತಿಳಿಸಿದರು. ರಾಜ್ಯ ವನಿತಾ ವಿಂಗ್ ಸದಸ್ಯರಾದ ಸುಚಿತ ಟೀಚರ್, ಜಿಲ್ಲಾಸಮಿತಿ ಸದಸ್ಯರಾದ ಈಶ್ವರ ಕಿದೂರು, ಉಪಜಿಲ್ಲಾ ಅಧಕ್ಷೆ ಚಂದ್ರಿಕಾ ಟೀಚರ್, ಕಾರ್ಯದರ್ಶಿ ದೇವಿಪ್ರಸಾದ್ ಇನ್ನಿತರು ಮಾತನಾಡಿದರು.ಮಂಜೇಶ್ವರ ಉಪಜಿಲ್ಲಾ ಸದಸ್ಯರು ಧರಣಿಯಲ್ಲಿ ಪಾಲ್ಗೊಂಡರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ