ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸುವಲ್ಲಿ ಯಾವುದೇ ರಾಜಿ ಇಲ್ಲ: ಬಳ್ಳಾರಿ ಮೇಯರ್ ಮುಲ್ಲಂಗಿ ನಂದೀಶ್

Upayuktha
0


ಬಳ್ಳಾರಿ: ಬಳ್ಳಾರಿ ನಗರದ ಜನತೆಗೆ ಕುಡಿಯುವ ನೀರು, ಒಳಚರಂಡಿ, ರಸ್ತೆ, ಬೀದಿ ದೀಪ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅಧಿಕಾರಿಗಳ ಜೊತೆಯಾಗಲಿ ರಾಜಕಾರಣಿಗಳ ಜೊತೆಯಾಗಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಮಹಾಪೌರರಾದ ಮೂಲಂಗಿ ನಂದೀಶ್ ತಿಳಿಸಿದರು. 


ಅವರು ಮಹಾನಗರ ಪಾಲಿಕೆ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ನಗರದ ಬಹಳಷ್ಟು ಕಡೆಯಲ್ಲಿ ಒಳಚರಂಡಿ, ಕುಡಿಯುವ ನೀರು ಸಮರ್ಪಕ ರೀತಿಯಲ್ಲಿ ಸರಬರಾಜು ಆಗುತ್ತಿಲ್ಲ ಎಂದು ಸಾರ್ವಜನಿಕರು ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ, ಜೊತೆಗೆ ಬೀದಿ ದೀಪ ಮತ್ತು ರಸ್ತೆಯ ವ್ಯವಸ್ಥೆ ಒಳಚರಂಡಿ ವ್ಯವಸ್ಥೆ ಮತ್ತು ನೀರಿನ ವ್ಯವಸ್ಥೆ ಕೂಡ ಸರಿಯಾಗಿ ಇರುವುದಿಲ್ಲ, ಪಾಲಿಕೆಗೆ ಜನ ನಮ್ಮ ಮೇಲೆ ಭರವಸೆ ಇಟ್ಟಿದ್ದಾರೆ ಅವರ ನಂಬಿಕೆಯನ್ನು ಉಳಿಸಿಕೊಳ್ಳುವುದು ನಾನು ಸೇರಿದಂತೆ ಎಲ್ಲಾ ಪಾಲಿಕೆ ಸದಸ್ಯರ ಮತ್ತು ಅಧಿಕಾರಿಗಳ ಜವಾಬ್ದಾರಿಯಾಗಿದೆ ಕಾರಣ ಎಲ್ಲಾ ಇಲಾಖೆ ಅಧಿಕಾರಿಗಳು ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳನ್ನು ಜವಾಬ್ದಾರಿಯಿಂದ ಒದಗಿಸಿ ಕೊಡಬೇಕಾದ ಅವಶ್ಯಕವಾಗಿದೆ ಎಂದರು.


ನಗರದಲ್ಲಿ ಇಲಾಖೆಗಳು ರಸ್ತೆ ಸಮಸ್ಯೆ ಆಗಲಿ ವಿದ್ಯುತ್ ಕಂಬಗಳ ವ್ಯವಸ್ಥೆಯಾಗಲಿ ಮರ ಗಿಡಗಳು ಕಡಿಯುವ ನೀರು ಸರಬರಾಜು ವ್ಯವಸ್ಥೆಯಾಗಲಿ ಮಹಾನಗರ ಪಾಲಿಕೆಗೆ ಬಂದು ಚರ್ಚಿಸಬೇಕು ನಾವೆಲ್ಲ ನಗರ ಅಭಿವೃದ್ಧಿಗಾಗಿ ಪಣತೊಟ್ಟು ಕಾರ್ಯನಿರ್ವಹಿಸಬೇಕೆಂದು ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯನ್ನು ನೀಡಬಾರದು ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು.


ಈ ಸಂದರ್ಭದಲ್ಲಿ ಉಪ ಮಹಾಪೌರರಾದ ಡಿ ಸುಕುಂ ಸೇರಿದಂತೆ ಪಾಲಿಕೆಯ ಎಲ್ಲಾ ಸದಸ್ಯರುಗಳು ಎಲ್ಲಾ ಸ್ಥಾಯಿ ಸಮಿತಿಗಳ ಅಧ್ಯಕ್ಷರುಗಳು ಹಾಗೂ ಕಂದಾಯ ಇಲಾಖೆ ಆರೋಗ್ಯ ಇಲಾಖೆ ಅರಣ್ಯ ಇಲಾಖೆ ಶಿಕ್ಷಣ ಇಲಾಖೆ ನೀರು ಸರಬರಾಜು ಮತ್ತು ಒಳಚರಂಡಿ ಇಲಾಖೆಯ ಅಧಿಕಾರಿಗಳ ಜೊತೆಗೆ 17 ಇಲಾಖೆಗಳ ಅಧಿಕಾರಿಗಳು ಈ ಪ್ರಗತಿ ಪರಿಶೀಲನ ಸಭೆಯಲ್ಲಿ ಭಾಗವಹಿಸಿದ್ದರು.


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top