ನೊಣವಿನಕೆರೆ: 2024-25ನೇ ಶಾಲಾ ಸಂಸತ್ ಚುನಾವಣೆಯನ್ನು ಡಾ ಬಿ.ಆರ್ ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ನೊಣವಿನಕೆರೆ ತಿಪಟೂರು ತಾಲ್ಲೂಕು (ತುಮಕೂರು ಜಿಲ್ಲೆ) ಇಲ್ಲಿ ಮೊಬೈಲ್ ಇವಿಎಂ ಆಪ್ ಮುಖಾಂತರ ನಡೆಸಲಾಯಿತು.
ಈ ಪ್ರಕ್ರಿಯೆಯಲ್ಲಿ ಶಿಕ್ಷಕ ಸಂಪನ್ಮೂಲ ವ್ಯಕ್ತಿಗಳಾದ ನಿಜಗುಣ ಅವರ ಮಾರ್ಗದರ್ಶನದಲ್ಲಿ ಪ್ರಜಾಪ್ರಭುತ್ವದ ಹಾಗೂ ಸಂವಿಧಾನಾತ್ಮಕ ಮೌಲ್ಯ ಬೆಳೆಸುವಂತಹ ಚುನಾವಣೆ ಪ್ರಕ್ರಿಯೆಯನ್ನು ವಿದ್ಯಾರ್ಥಿಗಳಿಗೆ ಶಾಲಾ ಸಂಸತ್ ಚುನಾವಣೆ ಮುಖೇನ ನಡೆಸಲಾಯಿತು.
ವಿದ್ಯಾರ್ಥಿಗಳು ಅತಿ ಉತ್ಸಾಹದಿಂದ ಪಾಲ್ಗೊಂಡು ಇವಿಎಂ ಮೊಬೈಲ್ ಆಪ್ ಮುಖಾಂತರ ಮತದಾನ ಮಾಡುವ ಮೂಲಕ ಮತದಾನ ಮತದಾನ ಮಾಡುವ ಪ್ರಕ್ರಿಯೆಯನ್ನು ತಿಳಿದುಕೊಳ್ಳುವ ಮೂಲಕ ಶಾಲಾ ಸಂಸತ್ ಚುನಾವಣೆ ಯಶಸ್ವಿಗೊಳಿಸಿದರು.
ನಂತರ ವಿದ್ಯಾರ್ಥಿಗಳು ತಮ್ಮ ಅನಿಸಿಕೆ ತಿಳಿಸುತ್ತಾ ನಿಜಗುಣ ಸರ್ ಅವರು ನಮಗೆ ಅತ್ಯುತ್ತಮ ಮಾರ್ಗದರ್ಶನ ಹಾಗೂ ಸಲಹೆ ನೀಡಿದ್ದರು; ಹಾಗಾಗಿ ನಾವು ಈ ಶಾಲಾ ಸಂಸತ್ ಚುನಾವಣೆಯಲ್ಲಿ ಮತದಾನ ಮಾಡಿದ್ದು ಬಹಳ ಸಂತೋಷವಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ