ಪೆರ್ನಾಜೆ ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜು: ಪೋಷಕರ ಸಭೆ, ಪ್ರತಿಭೋತ್ಸವ

Upayuktha
0


ಪುತ್ತೂರು: ಪೆರ್ನಾಜೆಯ ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜುಲೈ 10ರಂದು ಹೆತ್ತವರ/ಪೋಷಕರ ಸಭೆ ಮತ್ತು ಪ್ರತಿಭೋತ್ಸವ ಕಾರ್ಯಕ್ರಮ ಜರುಗಿತು. ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಶ್ರೀ ಮಂಟ್ಯಯ್ಯರವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.


ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪೋಷಕರ/ ಹೆತ್ತವರ ಮತ್ತು ವಿದ್ಯಾರ್ಥಿಗಳ ಸಂಬಂಧ ಮಧುರವಾಗಿ ಸ್ನೇಹಮಯವಾಗಿರ ಬೇಕೆಂದು ಸಂದರ್ಭೋಚಿತವಾಗಿ ನುಡಿದರು. ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿಯಾದ ಶ್ರೀಮತಿ ಸುಜಾತರವರು ಮಕ್ಕಳು ಕಲಿಕೆಯ ಜೊತೆಯಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದರ ಮೂಲಕ ಸರ್ವಾಂಗೀಣ ಪ್ರಗತಿಯನ್ನು ಸಾಧಿಸಬಹುದೆಂದು ಶುಭ ಹಾರೈಸಿದರು. ಸರಕಾರಿ ಹಿರಿಯ ಪ್ರಾಧಮಿಕ ಶಾಲೆಯ ಮುಖ್ಯಗುರುಗಳಾದ ಶ್ರೀಮತಿ ಶಾರದರವರು ಸಭೆಯಲ್ಲಿ ಉಪಸ್ಥಿತಿರಿದ್ದು ಶುಭ ಹಾರೈಸಿದರು.


ಪ್ರತಿಭೋತ್ಸವದ ಅಂಗವಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು, ಪ್ರೌಢಶಾಲಾ ಹಾಗೂ ಪದವಿಪೂರ್ವ ವಿಭಾಗದ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ತಮ್ಮ ಪ್ರತಿಭೆಯನ್ನು ವೇದಿಕೆಯಲ್ಲಿ ಅನಾವರಣಗೊಳಿಸಿದರು.


ನಿವೃತ್ತ ಕನ್ನಡ ಉಪನ್ಯಾಸಕಿ ಶ್ರೀಮತಿ ಸುಕನ್ಯ ದೇಲಂತಬೆಟ್ಟು ಇವರು ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಎಲ್ಲಾ ಅಧ್ಯಾಪಕರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಅಂದಗಾಣಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top