ಕಲಬುರಗಿ: ಕಲಬುರ್ಗಿ ಜಿಲ್ಲಾ ಹೋಟೆಲ್ ಅಸೋಸಿಯೇಷನ್ ನ ಕಾರ್ಯದರ್ಶಿ ಹಾಗೂ ಕಲಬುರ್ಗಿ ವಿಮಾನ ನಿಲ್ದಾಣ ಪ್ರಾಧಿಕಾರದ ಸದಸ್ಯರಾದ ನರಸಿಂಹ ಮೆಂಡನ್ ಅವರ ಪುತ್ರ ಪ್ರಣವ್ ಮೆಂಡನ್ ಅವರು ಮಂಗಳೂರಿನ ಪ್ರತಿಷ್ಠಿತ ಕಾಲೇಜ್ ಎ.ಜೆ.ಗ್ರೂಪ್ ನವರ ಲಕ್ಷ್ಮಿ ಕಾಲೇಜ್ ಆಫ್ ಫಿಸಿಯೋಥೆರಪಿ ಯಲ್ಲಿ ಜುಲೈ 4ರಂದು ಪದವಿ ಪಡೆದುಕೊಂಡಿದ್ದಾರೆ.
ಮಂಗಳೂರಿನ ಮೋತಿ ಮಹಲ್ ಕನ್ವೆನ್ಷನ್ ಸಭಾಂಗಣದಲ್ಲಿ ನಡೆದ ಪದವಿ ಪ್ರದಾನ ಸಮಾರಂಭದಲ್ಲಿ ಎ.ಜೆ ಆಸ್ಪತ್ರೆಯ ವಿಶ್ರಾಂತ ಡೀನ್ ಡಾ. ರಮೇಶ್ ಪೈ ಪದವಿ ನೀಡಿದರು. ಲಕ್ಷ್ಮೀ ಸ್ಮಾರಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಎ.ಜೆ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಲಕ್ಷ್ಮೀ ಸ್ಮಾರಕ ಶಿಕ್ಷಣ ಸಂಸ್ಥೆಯ ನಿರ್ದೇಶಕಿ, ಶ್ರೀಮತಿ ಅಶ್ರಿತಾ ಪಿ ಶೆಟ್ಟಿ, ಉಪಾಧ್ಯಕ್ಷರಾದ ಪ್ರಶಾಂತ ಶೆಟ್ಟಿ ಸಂಸ್ಥೆ ಸಂಸ್ಥೆಯ ಪದಾಧಿಕಾರಿಗಳಾದ ಶಾರದಾ ಜಿ ಶೆಟ್ಟಿ, ಡಾ. ಪ್ರಶಾಂತ್ ಮಾರ್ಲ, ಡಾ. ಅಮಿತ್ ಮಾರ್ಲ ಮತ್ತಿತರರು ಉಪಸ್ಥಿತರಿದ್ದರು.
ಫಿಸಿಯೊಥೆರಪಿ ಪದವಿ ಪಡೆದ ಪ್ರಣವ್ ಮೆಂಡನ್ ಅವರಿಗೆ ದಕ್ಷಿಣ ಕನ್ನಡ ಸಂಘದ ಮಾಜಿ ಅಧ್ಯಕ್ಷ ಡಾ. ಸದಾನಂದ ಪೆರ್ಲ, ಬ್ರಹ್ಮಶ್ರೀ ನಾರಾಯಣ ಗುರು ಟ್ರಸ್ಟ್ ನ ಅಧ್ಯಕ್ಷ ವೆಂಕಟೇಶ್ ಕಡೇಚೂರ್ ಅಭಿನಂದನೆ ಸಲ್ಲಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ