ರಾಜ್ಯಮಟ್ಟದ 'ವಿಕಾಸಶ್ರೀ ಪ್ರಶಸ್ತಿ'ಗೆ ಕವಯತ್ರಿ ಹೆಚ್.ಎಸ್. ಪ್ರತಿಮಾ ಹಾಸನ್ ಆಯ್ಕೆ

Upayuktha
0


ಹಾಸನ: ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯ ವತಿಯಿಂದ ಕೆ.ಹೆಚ್. ರಾಮಯ್ಯ ಸ್ಮರಣಾರ್ಥ ಕೊಡಮಾಡುವ ರಾಜ್ಯಮಟ್ಟದ 'ವಿಕಾಸಶ್ರೀ ಪ್ರಶಸ್ತಿ'ಗೆ ಜಿಲ್ಲೆಯ ಕವಯತ್ರಿ, ಅಂಕಣಕಾರ್ತಿ, ಶಿಕ್ಷಕಿ, ನಿರೂಪಕಿ ಹೆಚ್.ಎಸ್. ಪ್ರತಿಮಾ ಹಾಸನ ಅವರು ಆಯ್ಕೆಯಾಗಿದ್ದಾರೆ ಎಂದು ವೇದಿಕೆಯ ಅಧ್ಯಕ್ಷೆ ಹೆಚ್.ಎಲ್. ಯಮುನಾ ತಿಳಿಸಿದ್ದಾರೆ.


ಸಂಸ್ಥಾಪಕ ಅಧ್ಯಕ್ಷರು ಪ್ರತಿಮಾ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ರಾಗಿದ್ದು ಮತ್ತು ಸಾಹಿತ್ಯ, ಶಿಕ್ಷಣ, ಸಾಂಸ್ಕೃತಿಕ ಮತ್ತು ಸಮಾಜ ಸೇವಾ ಕ್ಷೇತ್ರದಲ್ಲಿ ಹೆಚ್.ಎಸ್. ಪ್ರತಿಮಾ ಹಾಸನ್ ಅವರು ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.


ಜು. 12ರಂದು ಸಂಜೆ 4:30 ಕ್ಕೆ ಮೈಸೂರಿನ 'ದ ಪ್ರೆಸಿಡೆಂಟ್' ಹೋಟೆಲ್ ಸಭಾಂಗಣದಲ್ಲಿ ನಡೆಯಲಿರುವ  ಕೆ.ಹೆಚ್. ರಾಮಯ್ಯ ಸಂಸ್ಮರಣಾ ಸಮಾರಂಭದಲ್ಲಿ ಶ್ರೀರಂಗಪಟ್ಟಣ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಹೆಚ್.ಕೆ. ರಾಮು, ಸಾಹಿತಿ ಟಿ. ಸತೀಶ್ ಜವರೇಗೌಡ, ಖ್ಯಾತ ವೈದ್ಯ ಸಾಹಿತಿ ಡಾ.ಎಸ್.ಪಿ. ಯೋಗಣ್ಣ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
To Top