ಡಾ. ಸುಬ್ರಹ್ಮಣ್ಯ ಭಟ್ಟರ ಎರಡನೇ ಕಾದಂಬರಿ "ಪುಟ್ಟಣ್ಣ ಮಾಷ್ಟ್ರು" ಬಿಡುಗಡೆ

Upayuktha
0


ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ  ಎರಡನೇ ಕಾದಂಬರಿ "ಪುಟ್ಟಣ್ಣ ಮಾಷ್ಟ್ರು" ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಕಾದಂಬರಿ ಕೃತಿಕಾರ ಡಾ.ಸುಬ್ರಹ್ಮಣ್ಯ ಭಟ್ಟರು , ಅವರ ಮಕ್ಕಳಾದ ಅಭಿಗಮ್ಯ ರಾಮ್ , ಆಶ್ಮನ್ ಕೃಷ್ಣ ಹಾಗೂ ಗಟ್ಟಿಗಾರು ಗೋಪಾಲಕೃಷ್ಣ ಭಟ್ ರವರು ಉಪಸ್ಥಿತರಿದ್ದರು.


ಇದೇ ಸಂದರ್ಭದಲ್ಲಿ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಶ್ರೀ ಡಿ. ಹರ್ಷೇಂದ್ರ ಕುಮಾರ್ ರವರು ಸಮಯದ ಸದುಪಯೋಗ ಮಾಡಿ ಇಂತಹ ಉತ್ತಮ ಕೃತಿಗಳನ್ನು ನೀಡುತ್ತಿರುವುದು ಶ್ಲಾಘನೀಯ ಎಂದು ಶುಭಾಶಯ ತಿಳಿಸಿದರು.


ಕಾದಂಬರಿಗೆ ಬೆಳ್ತಂಗಡಿ ತಾಲೂಕಿನ ಹಿರಿಯ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿಯವರು ಮುನ್ನುಡಿ ಬರೆದಿದ್ದಾರೆ. ಪ್ರಸ್ತುತ ಕಾದಂಬರಿಯನ್ನು ಮೈಸೂರಿನ ಅಂಬಾರಿ ಪ್ರಕಾಶನದವರು ಪ್ರಕಟಿಸಿದ್ದು ಪ್ರತಿಗಳಿಗಾಗಿ ಲೇಖಕರನ್ನು (9448951856) ಸಂಪರ್ಕಿಸಬಹುದಾಗಿದೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top