ಪುತ್ತೂರು: ಯುವ ರೋಟರಿ ಕ್ಲಬ್ ನಿಂದ 125ಕ್ಕೂ ಅಧಿಕ ಸಾಕುನಾಯಿಗಳಿಗೆ ಸಂತಾನಹರಣ ಚಿಕಿತ್ಸೆ

Upayuktha
0

ಪುತ್ತೂರು: ಬೀದಿ ನಾಯಿಗಳನ್ನು ಕೊಲ್ಲುವುದು ಕಾನೂನಿಗೆ ವಿರುದ್ದವಾಗಿದ್ದು, ಅವುಗಳ ನಿಯಂತ್ರಣ ಕೆಲಸ ನಡೆಯುತ್ತಿರುವುದು ಉತ್ತಮ ಕಾರ್ಯವಾಗಿದೆ. ಸಂತಾನ ಹರಣದಿಂದ ಬೀದಿ ನಾಯಿಗಳ ಸಂಖ್ಯೆ ಕಡಿಮೆಯಾಗುತ್ತದೆ. ಸಮಾಜದ ಎಲ್ಲಾ ಸ್ಥರದಲ್ಲೂ ಕೆಲಸಗಳು ನಡೆಯಬೇಕು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.


ಮಂಗಳವಾರ ಪೋಳ್ಯದಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ, ವರ್ಲ್ಡ್ ವೈಡ್ ವೆಟರ್ನರಿ ಸರ್ವಿಸ್ ಹಾಗೂ ಮಲ್ಪೆ ಮಧ್ವರಾಜ್ ಅನಿಮಲ್ ಕೇರ್ ಟ್ರಸ್ಟ್ ವತಿಯಿಂದ ನಡೆದ ಮನೆ ನಾಯಿಗಳಿಗೆ ಉಚಿತವಾಗಿ ಸಂತಾನಹರಣ ಚಿಕಿತ್ಸೆ ಸೌಲಭ್ಯದಲ್ಲಿ ಭಾಗವಹಿಸಿ ಮಾತನಾಡಿದರು.


ಮುಳಿಯ ಜ್ಯುವೆಲ್ಸ್ ನ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ ಮಾತನಾಡಿ ಅಪಘಾತಕ್ಕೊಳಗಾದ ನಾಯಿಗಳಿಗೆ ತುರ್ತು ಚಿಕಿತ್ಸೆ ನೀಡುವ ಜತೆಗೆ ಆರೋಗ್ಯ ಸರಿಯಿಲ್ಲದ ನಾಯಿಗಳ ಆರೈಕೆ ಮಾಡುವ ಕೇಂದ್ರದ ಸ್ಥಾಪನೆಯ ಯೋಚನೆಯನ್ನು ಹಾಕಿಕೊಳ್ಳಲಾಗಿದೆ. ಸಂತಾನ ಹರಣ ಚಿಕಿತ್ಸೆಯ ಬಳಿಕ ಅವುಗಳ ಪಾಲನೆಯ ಜವಾಬ್ದಾರಿಯನ್ನು ತೆಗೆದುಕೊಳ್ಳುವ ಮೂಲಕ ಬೀದಿ ನಾಯಿಗಳ ಸಂಖ್ಯೆ ಕಡಿಮೆ ಮಾಡುವ ಕಾರ್ಯ ನಡೆಯುತ್ತದೆ ಎಂದು ತಿಳಿಸಿದರು.


೧೨೫ಕ್ಕೂ ಅಧಿಕ ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ನೀಡಲಾಯಿತು. ರೋಟರಿ ಕ್ಲಬ್ ಪುತ್ತೂರು ಯುವ ಅಧ್ಯಕ್ಷೆ ಅಶ್ವಿನಿ ಕೃಷ್ಣ ಮುಳಿಯ, ಮಲ್ಪೆ ಮಧ್ವರಾಜ್ ಅನಿಮಲ್ ಕೇರ್ ಟ್ರಸ್ಟ್ ಮುಖ್ಯಸ್ಥೆ ಮಮತಾ ರಾವ್ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
To Top